ADVERTISEMENT

ಟಾಟಾ ಮೋಟರ್ಸ್‌ಗೆ ₹ 4,415 ಕೋಟಿ ನಷ್ಟ

ಪಿಟಿಐ
Published 1 ನವೆಂಬರ್ 2021, 13:50 IST
Last Updated 1 ನವೆಂಬರ್ 2021, 13:50 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ನವದೆಹಲಿ: ಟಾಟಾ ಮೋಟರ್ಸ್‌ ಕಂಪನಿಯು ಸೆಪ್ಟೆಂಬರ್‌ ತ್ರೈಮಾಸಿಕದಲ್ಲಿ ಒಟ್ಟು ₹ 4,415 ಕೋಟಿ ನಷ್ಟ ಅನುಭವಿಸಿದೆ. ಸೆಮಿಕಂಡಕ್ಟರ್ ಕೊರತೆಯ ಕಾರಣದಿಂದಾಗಿ ಜೆಎಲ್‌ಆರ್‌ ಕಾರುಗಳ ಮಾರಾಟ ಪ್ರಮಾಣ ಕಡಿಮೆ ಆಗಿದ್ದು, ವೆಚ್ಚಗಳು ಹೆಚ್ಚಾಗಿದ್ದು ನಷ್ಟಕ್ಕೆ ಕಾರಣ ಎಂದು ಕಂಪನಿ ಹೇಳಿದೆ.

ಹಿಂದಿನ ವರ್ಷದ ಇದೇ ಅವಧಿಯಲ್ಲಿ ಕಂಪನಿಯು ₹ 307 ಕೋಟಿ ನಷ್ಟ ಕಂಡಿತ್ತು. ಈ ವರ್ಷದ ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಕಂಪನಿಯ ಆದಾಯವು ₹ 61,378 ಕೋಟಿಗೆ ಏರಿಕೆ ಕಂಡಿದೆ. ಇದು ಹಿಂದಿನ ವರ್ಷದ ಇದೇ ಅವಧಿಯಲ್ಲಿ ₹ 53,530 ಕೋಟಿ ಇತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT