ADVERTISEMENT

ಜನವರಿಯಿಂದ ಕಾರುಗಳ ಬೆಲೆ ಏರಿಕೆ ಮಾಡುವುದಾಗಿ ಘೋಷಿಸಿದ ಟೊಯೋಟ

ಪಿಟಿಐ
Published 15 ಡಿಸೆಂಬರ್ 2021, 12:19 IST
Last Updated 15 ಡಿಸೆಂಬರ್ 2021, 12:19 IST
   

ನವದೆಹಲಿ: ತಯಾರಿಕಾ ವೆಚ್ಚ ಹೆಚ್ಚಳವನ್ನು ಸರಿದೂಗಿಸುವ ಸಲುವಾಗಿ ಜನವರಿಯಿಂದ ತನ್ನ ಎಲ್ಲ ವಾಹನಗಳ ಬೆಲೆಯನ್ನು ಹೆಚ್ಚಿಸುವುದಾಗಿ ಟೊಯೋಟ ಕಿರ್ಲೋಸ್ಕರ್ ಮೋಟರ್‌ (ಟಿಕೆಎಂ) ಬುಧವಾರ ಹೇಳಿದೆ.

ಕಚ್ಚಾ ಸರಕುಗಳನ್ನೂ ಒಳಗೊಂಡು ತಯಾರಿಕೆಗೆ ಸಂಬಂಧಿಸಿದ ಎಲ್ಲಾ ರೀತಿಯ ವೆಚ್ಚಗಳಲ್ಲಿಯೂ ಏರಿಕೆ ಆಗಿದೆ. ಹೀಗಿದ್ದರೂ ಗ್ರಾಹಕರ ಮೇಲೆ ಹೆಚ್ಚಿನ ಪರಿಣಾಮ ಉಂಟಾಗದಂತೆ ನೋಡಿಕೊಳ್ಳಲಾಗುವುದು ಎಂದು ಕಂಪನಿಯು ಪ್ರಕಟಣೆಯಲ್ಲಿ ತಿಳಿಸಿದೆ.

ಮಾರುತಿ ಸುಜುಕಿ, ಟಾಟಾ ಮೋಟರ್ಸ್‌, ಮರ್ಸಿಡಿಸ್‌ ಬೆಂಜ್‌ ಮತ್ತು ಹೋಂಡಾ ಸೇರಿದಂತೆ ಹಲವು ಕಂಪನಿಗಳು ಜನವರಿಯಿಂದ ಬೆಲೆ ಏರಿಕೆ ಮಾಡುವುದಾಗಿ ಈಗಾಗಲೇ ಘೋಷಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.