ADVERTISEMENT

ದ್ವಿಚಕ್ರ: ಜಿಎಸ್‌ಟಿ ಇಳಿಕೆ?

ಪಿಟಿಐ
Published 26 ಆಗಸ್ಟ್ 2020, 6:27 IST
Last Updated 26 ಆಗಸ್ಟ್ 2020, 6:27 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ‘ದ್ವಿಚಕ್ರ ವಾಹನಗಳು ಐಷಾರಾಮಿ ಸರಕುಗಳ ಅಥವಾ ಆರೋಗ್ಯಕ್ಕೆ ಹಾನಿಕಾರಕ ಉತ್ಪನ್ನಗಳ ವ್ಯಾಪ್ತಿಗೆ ಬರುವುದಿಲ್ಲ. ಹೀಗಾಗಿ ತೆರಿಗೆ ದರ ಪರಿಷ್ಕರಣೆಯನ್ನು ಪರಿಗಣಿಸಲಾಗುವುದು’ ‌ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ.

ಭಾರತೀಯ ಕೈಗಾರಿಕಾ ಒಕ್ಕೂಟವು (ಸಿಐಐ) ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತೆರಿಗೆ ದರ ಪರಿಷ್ಕರಿಸುವ ಪ್ರಸ್ತಾವನೆಯನ್ನು ಜಿಎಸ್‌ಟಿ ಮಂಡಳಿಯ ಮುಂದಿಡುವುದಾಗಿ ತಿಳಿಸಿದ್ದಾರೆ ಎಂದು ಸಿಐಐ ಮತ್ತು ಹಣಕಾಸು ಸಚಿವಾಲಯದ ವಕ್ತಾರರು ಹೊರಡಿಸಿರುವ ಪ್ರಕಟಣೆಗಳಲ್ಲಿ ತಿಳಿಸಲಾಗಿದೆ.

ಸದ್ಯ ದ್ವಿಚಕ್ರವಾಹನಗಳಿಗೆ ಶೇಕಡ 28ರ ಗರಿಷ್ಠ ತೆರಿಗೆ ದರ ಇದೆ. ಇದನ್ನು ತಗ್ಗಿಸುವ ಕುರಿತ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದ ಅವರು, ‘ಇದೊಂದು ಉತ್ತಮ ಸಲಹೆ. ಇದನ್ನು ಪರಿಗಣಿಸಲಾಗುವುದು ಎಂದು ಭರವಸೆ ನೀಡಿದ್ದಾರೆ’ ಎಂದೂ ಸಿಐಐ ತಿಳಿಸಿದೆ.

ADVERTISEMENT

150 ಸಿಸಿ ವರೆಗಿನ ಬೈಕ್‌ಗಳ ಮೇಲಿನ ಜಿಎಸ್‌ಟಿಯನ್ನು ಶೇ 18ರ ತೆರಿಗೆ ವ್ಯಾಪ್ತಿಗೆ ತರುವಂತೆ ಹೀರೊ ಮೊಟೊಕಾರ್ಪ್‌ ಕಂಪನಿಯು ಕಳೆದ ವರ್ಷ ಸರ್ಕಾರಕ್ಕೆ ಮನವಿ ಮಾಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.