ಶಿವಗಂಗಾ(ಪಿಟಿಐ): ಕಲ್ಲಿದ್ದಲು ಮತ್ತು ಕಬ್ಬಿಣದ ಅದಿರು ನಿಕ್ಷೇಪಗಳು ದೇಶದ ಆರ್ಥಿಕ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಕೇಂದ್ರ ಹಣಕಾಸು ಸಚಿವ ಪಿ.ಚಿದಂಬರಂ ಹೇಳಿದ್ದಾರೆ.
ಇಲ್ಲಿ ಆಂಧ್ರ ಬ್ಯಾಂಕಿನ ಹೊಸ ಶಾಖೆ ಉದ್ಘಾಟಿಸಿ ಅವರು ಮಾತನಾಡಿದರು.
ಅದಿರು ನಿಕ್ಷೇಪದಲ್ಲಿ ಚೀನಾ ಸಾಕಷ್ಟು ಪ್ರಗತಿ ಸಾಧಿಸಿದೆ. ಆದರೆ, ಭಾರತದಲ್ಲಿ ಅದಿರು ಸಂಗ್ರಹಕ್ಕೆ ಸಂಬಂಧಿಸಿ ಸಾಕಷ್ಟು ಟೀಕೆಗಳಿವೆ. ಆದರೆ, ಕೈಗಾರಿಕೆ ಅಭಿವೃದ್ಧಿ ಮತ್ತು ವಿದ್ಯುತ್ ವಲಯಕ್ಕೆ ಕಲ್ಲಿದ್ದಲು ಸಂಗ್ರಹ ಅತ್ಯಗತ್ಯ. 100 ವರ್ಷಗಳ ಹಿಂದೆಯೇ ಕಬ್ಬಿಣದ ಅದಿರು ನಿಕ್ಷೇಪ ಪತ್ತೆಯಾಗದಿದ್ದರೆ ಜೆಮ್‌ಷೆಡ್‌ಪುರ ಇಂದು ಇಷ್ಟೊಂದು ಪ್ರಗತಿ ಸಾಧಿಸುತ್ತಿರಲಿಲ್ಲ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.