ADVERTISEMENT

ಆರ್‌ಬಿಐ ಡೆಪ್ಯುಟಿ ಗವರ್ನರ್‌ ಆಗಿ ಮಹೇಶ್‌ ಕುಮಾರ್‌ ಜೈನ್‌ ನೇಮಕ

​ಪ್ರಜಾವಾಣಿ ವಾರ್ತೆ
Published 4 ಜೂನ್ 2018, 19:30 IST
Last Updated 4 ಜೂನ್ 2018, 19:30 IST
ಮಹೇಶ್‌ ಕುಮಾರ್‌ ಜೈನ್‌
ಮಹೇಶ್‌ ಕುಮಾರ್‌ ಜೈನ್‌   

ನವದೆಹಲಿ : ಐಡಿಬಿಐ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಮಹೇಶ್‌ ಕುಮಾರ್‌ ಜೈನ್‌ ಅವರನ್ನು ಭಾರತೀಯ ರಿಸರ್ವ್‌ ಬ್ಯಾಂಕ್‌ನ ಡೆಪ್ಯುಟಿ ಗವರ್ನರ್‌ ಆಗಿ ನೇಮಿಸಲಾಗಿದೆ.

ಮೂರು ವರ್ಷಗಳ ಅಧಿಕಾರಾವಧಿ ಪೂರ್ಣಗೊಳಿಸಿರುವ ಎಸ್‌. ಎಸ್‌. ಮುಂದ್ರಾ ಅವರಿಂದ ತೆರವಾದ ಸ್ಥಾನಕ್ಕೆ ಜೈನ್‌ ಅವರನ್ನು ಮೂರು ವರ್ಷಗಳ ಅವಧಿಗೆ ನೇಮಿಸಲಾಗಿದೆ ಎಂದು ಹಣಕಾಸು ಸೇವೆಗಳ ಕಾರ್ಯದರ್ಶಿ ರಾಜೀವ್‌ ಕುಮಾರ್‌ ಟ್ವೀಟ್‌ ಮಾಡಿದ್ದಾರೆ.

ಬ್ಯಾಂಕಿಂಗ್‌ ಕ್ಷೇತ್ರದಲ್ಲಿ 30 ವರ್ಷಗಳ ಅನುಭವ ಹೊಂದಿರುವ ಜೈನ್‌ ಅವರು, 2017ರ ಮಾರ್ಚ್‌ ತಿಂಗಳಿನಿಂದ ಐಡಿಬಿಐ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.