ADVERTISEMENT

ಆಸ್ಟ್ರೇಲಿಯಾಗೆ ತೆರಿಗೆ ವಿನಾಯ್ತಿ?

ಪಿಟಿಐ
Published 10 ಮಾರ್ಚ್ 2018, 19:30 IST
Last Updated 10 ಮಾರ್ಚ್ 2018, 19:30 IST

ವಾಷಿಂಗ್ಟನ್: ಆಸ್ಟ್ರೇಲಿಯಾದಿಂದ ಆಮದು ಮಾಡಿಕೊಳ್ಳುವ ಉಕ್ಕು ಮತ್ತು ಅಲ್ಯುಮಿನಿಯಂ ಲೋಹಗಳಿಗೆ ತೆರಿಗೆ ವಿನಾಯ್ತಿ ನೀಡುವ ಸೂಚನೆಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿದ್ದಾರೆ.

ಅಸಮರ್ಪಕ ಆಮದು ನೀತಿಯಿಂದ ಅಮೆರಿಕದ ಲೋಹ ಉದ್ಯಮ ಎದುರಿಸುತ್ತಿರುವ ನಷ್ಟ ತಡೆಗಟ್ಟಲು ಉಕ್ಕು ಮತ್ತು ಅಲ್ಯುಮಿನಿಯಂ ಲೋಹಗಳ ಮೇಲೆ ಕ್ರಮವಾಗಿ ಶೇ 25 ಮತ್ತು ಶೇ 10ರಷ್ಟು ಗರಿಷ್ಠ ಪ್ರಮಾಣದ ತೆರಿಗೆ ವಿಧಿಸುವ ಆದೇಶಕ್ಕೆ ಟ್ರಂಪ್‌ ಅವರು ಶುಕ್ರವಾರ ಸಹಿ ಹಾಕಿದ್ದಾರೆ.

ಈಗಾಗಲೇ ನೆರೆಯ ಮೆಕ್ಸಿಕೊ ಮತ್ತು ಕೆನಡಾ ರಾಷ್ಟಗಳಿಗೆ ತೆರಿಗೆ ವಿನಾಯ್ತಿ ನೀಡಲಾಗಿದೆ. ಈ ವಿನಾಯ್ತಿ ಸೌಲಭ್ಯವನ್ನು ಆಸ್ಟ್ರೇಲಿಯಾಕ್ಕೆ ನೀಡುವುದಾಗಿ ಟ್ರಂಪ್ ಸೂಚನೆ ನೀಡಿದ್ದಾರೆ. ಈ ಬಗ್ಗೆ ಆಸ್ಟ್ರೇಲಿಯಾ ಪ್ರಧಾನಿ ಮಾಲ್ಕಂ ಟರ್ನ್‌ಬುಲ್‌ ಅವರೊಂದಿಗೆ ಚರ್ಚೆ ನಡೆಸಿರುವುದಾಗಿ ತಿಳಿಸಿದ್ದಾರೆ.

ADVERTISEMENT

‘ಆಸ್ಟೇಲಿಯಾ ಜತೆ ಮಾಡಿಕೊಂಡಿರುವ ಸೇನೆ ಮತ್ತು ವ್ಯಾಪಾರ ಒಪ್ಪಂದಗಳಿಗೆ ಅಮೆರಿಕ ಬದ್ಧವಾಗಿದೆ. ಹೀಗಾಗಿ ಆ ದೇಶದಿಂದ ಆಮದು ಮಾಡಿಕೊಳ್ಳುವ ಉಕ್ಕು ಮತ್ತು ಅಲ್ಯುಮಿನಿಯಂ ಲೋಹಗಳಿಗೆ ತೆರಿಗೆ ವಿಧಿಸುವುದಿಲ್ಲ’ ಎಂದು ಟ್ರಂಪ್ ಟ್ವೀಟ್ ಮಾಡಿದ್ದಾರೆ.

‘ಆಸ್ಟ್ರೇಲಿಯಾಕ್ಕೆ ತೆರಿಗೆ ವಿನಾಯ್ತಿ ನೀಡುವುದಾಗಿ ತಿಳಿಸಿರುವ  ಟ್ರಂಪ್‌ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇವೆ’ ಎಂದು ಆಸ್ಟೇಲಿಯಾ ಪ್ರಧಾನಿ ಮಾಲ್ಕಂ ಅವರು ಮರು ಟ್ವೀಟ್ ಮಾಡಿದ್ದಾರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.