ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಸೋಮವಾರದಿಂದ ಒಂದು ವಾರದವರೆಗೆ ಆರ್ಥಿಕ ಸಾಕ್ಷರತಾ ಕಾರ್ಯಕ್ರಮ ಹಮ್ಮಿಕೊಂಡಿದೆ.
‘ಗ್ರಾಹಕ ಹಿತರಕ್ಷಣೆ’ ವಿಷಯದ ಕುರಿತು ಗ್ರಾಹಕರಲ್ಲಿ ಜಾಗೃತಿ ಮೂಡಿಸುವುದಾಗಿ ಹೇಳಿದೆ.
ಜೂನ್ 8 ರವರೆಗೆ ನಡೆಯುವ ಕಾರ್ಯಕ್ರಮದಲ್ಲಿ ಹಣಕಾಸು ಉತ್ಪನ್ನಗಳು ಮತ್ತು ಸೇವೆಗಳು, ಉತ್ತಮ ಹಣಕಾಸು ಯೋಜನೆಗಳು ಮತ್ತು ಡಿಜಿಟಲ್ ವಹಿವಾಟಿನ ಬಗ್ಗೆ ಬ್ಯಾಂಕಿಂಗ್ ಗ್ರಾಹಕರಲ್ಲಿ ಜಾಗೃತಿ ಮೂಡಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.