ADVERTISEMENT

`ಇನ್ನಷ್ಟು ಕಠಿಣ ಕ್ರಮ'

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2013, 19:59 IST
Last Updated 7 ಸೆಪ್ಟೆಂಬರ್ 2013, 19:59 IST
`ಇನ್ನಷ್ಟು ಕಠಿಣ ಕ್ರಮ'
`ಇನ್ನಷ್ಟು ಕಠಿಣ ಕ್ರಮ'   

ನವದೆಹಲಿ (ಪಿಟಿಐ): ಚಾಲ್ತಿ ಖಾತೆ ಕೊರತೆ (ಸಿಎಡಿ) ತಗ್ಗಿಸಲು ಅನಗತ್ಯ ಸರಕುಗಳ ಆಮದಿನ ಮೇಲೆ ನಿರ್ಬಂಧ ವಿಧಿಸುವುದು ಸೇರಿದಂತೆ ಶೀಘ್ರದಲ್ಲೇ ಸರ್ಕಾರ ಕೆಲವು ಕಠಿಣ ಕ್ರಮಗಳನ್ನು ಪ್ರಕಟಿಸಲಿದೆ ಎಂದು ಕೇಂದ್ರ ಹಣಕಾಸು ಸಚಿವ ಪಿ. ಚಿದಂಬರಂ ಹೇಳಿದ್ದಾರೆ.


`ಸದ್ಯ ದೇಶದ ಆರ್ಥಿಕತೆ ಸವಾಲಿನ ಹಾದಿಯಲ್ಲಿದೆ. ಈ ಹಿನ್ನೆಲೆಯಲ್ಲಿ ಕೆಲವು ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಅನಿವಾರ್ಯ. ಅನಗತ್ಯ ಸರಕುಗಳ ಆಮದಿನ ಮೇಲೆ ನಿರ್ಬಂಧ ಹೇರಲಾಗುವುದು' ಎಂದು  ಅವರು ಶನಿವಾರ ರಾಜ್ಯಸಭೆಯಲ್ಲಿ ಹೇಳಿದರು.

ತೆರಿಗೆಗಿಂತಲೂ ಹಣದುಬ್ಬರದ ಬಿಸಿ ಬಡವರನ್ನು ಹೆಚ್ಚಾಗಿ ತಟ್ಟಿದೆ. ಮಾರುಕಟ್ಟೆಯಲ್ಲಿ ಬೆಲೆ ಸ್ಥಿರತೆ ತರಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ  ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಕಚ್ಚಾತೈಲ ಬೆಲೆ ಹೆಚ್ಚಿರುವ ಹಿನ್ನೆಲೆಯಲ್ಲಿ ತೈಲ ಬೆಲೆ ಹೆಚ್ಚಿಸಲಾಗುವುದೇ ಎಂಬ ಪ್ರಶ್ನೆಗೆ, ಇಂತಹ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT