ADVERTISEMENT

ಎಚ್‌ಎಎಲ್‌: 16ಕ್ಕೆ ಐಪಿಒ

ಪಿಟಿಐ
Published 13 ಮಾರ್ಚ್ 2018, 19:30 IST
Last Updated 13 ಮಾರ್ಚ್ 2018, 19:30 IST

ನವದೆಹಲಿ: ಸರ್ಕಾರಿ ಸ್ವಾಮ್ಯದ  ಹಿಂದೂಸ್ತಾನ್‌ ಏರೊನಾಟಿಕ್ಸ್‌ ಲಿಮಿಟೆಡ್‌ (ಎಚ್‌ಎಎಲ್‌), ಆರಂಭಿಕ ಸಾರ್ವಜನಿಕ ನೀಡಿಕೆ (ಐಪಿಒ) ಮೂಲಕ ₹ 4,230 ಕೋಟಿಗಳಷ್ಟು ಬಂಡವಾಳ ಸಂಗ್ರಹಿಸಲು ಮುಂದಾಗಿದೆ.

ಇದೇ 16ರಂದು ‘ಐಪಿಒ’ ಬಿಡುಗಡೆಯಾಗಲಿದೆ. ಮಾರ್ಚ್‌ 20ಕ್ಕೆ ಈ ನೀಡಿಕೆ ಕೊನೆಗೊಳ್ಳಲಿದೆ. ಪ್ರತಿ ಷೇರಿನ ಬೆಲೆ‍ಪಟ್ಟಿಯು ₹ 1,215 ರಿಂದ ₹ 1,240ರವರೆಗೆ ಇರಲಿದೆ.

2016–17ರಲ್ಲಿ ಸಂಸ್ಥೆಯು ₹ 3,580 ಕೋಟಿಗಳಷ್ಟು ಲಾಭ ಮಾಡಿದೆ. ರಿಟೇಲ್‌ ಹೂಡಿಕೆದಾರರಿಗೆ ನೀಡಿಕೆ ಬೆಲೆಯಲ್ಲಿ ₹ 25ರಂತೆ ರಿಯಾಯ್ತಿ ನೀಡಲಾಗುತ್ತಿದೆ. ಎಚ್‌ಎಎಲ್‌ನಲ್ಲಿನ ತನ್ನ ಪಾಲು ಬಂಡವಾಳವನ್ನು ಸರ್ಕಾರ ಶೇ 20ರಷ್ಟು ಕಡಿಮೆ ಮಾಡಲು ಮುಂದಾಗಿದೆ. ಕೇಂದ್ರೋದ್ಯಮಗಳ ಷೇರು ವಿಕ್ರಯದ ಮೂಲಕ ಸರ್ಕಾರ ಪ್ರಸಕ್ತ ಹಣಕಾಸು ವರ್ಷದಲ್ಲಿ ₹ 75 ಸಾವಿರ ಕೋಟಿ ಸಂಗ್ರಹಿಸಲು ಉದ್ದೇಶಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.