
ಪ್ರಜಾವಾಣಿ ವಾರ್ತೆ
ಬೆಂಗಳೂರು: ಕರ್ನಾಟಕ ವಾಣಿಜ್ಯೋದ್ಯಮ ಮಹಾಸಂಘದ (ಎಫ್‌ಕೆಸಿಸಿಐ) 2010-11ನೇ ಸಾಲಿನ ಪತ್ರಿಕೋದ್ಯಮ ಪ್ರಶಸ್ತಿಗೆ `ಪ್ರಜಾವಾಣಿ~ಯ ವಾಣಿಜ್ಯ ವಿಭಾಗದ ಮುಖ್ಯಸ್ಥ ಕೇಶವ ಜಿ. ಝಿಂಗಾಡೆ ಅವರನ್ನು ಆಯ್ಕೆ ಮಾಡಲಾಗಿದೆ. ಇದೇ 24ರಂದು ನಡೆಯುವ ವಾರ್ಷಿಕ ಮಹಾಸಭೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು `ಎಫ್‌ಕೆಸಿಸಿಐ~ ಅಧ್ಯಕ್ಷ ಎನ್. ಎಸ್. ಶ್ರೀನಿವಾಸಮೂರ್ತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.