ನವದೆಹಲಿ: ಸರ್ಕಾರಿ ಸ್ವಾಮ್ಯದ ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್ಬಿಐ) 2017–18ನೇ ಹಣಕಾಸು ವರ್ಷದ ನಾಲ್ಕನೇ ತ್ರೈಮಾಸಿಕದಲ್ಲಿ ₹ 7,718 ಕೋಟಿ ನಷ್ಟ ಅನುಭವಿಸಿದೆ.
2016–17ನೇ ಹಣಕಾಸು ವರ್ಷದ ಇದೇ ಅವಧಿಯಲ್ಲಿ ₹ 2,815 ಕೋಟಿ ನಿವ್ವಳ ಲಾಭ ಗಳಿಸಿತ್ತು.
ವಸೂಲಿಯಾಗದ ಸಾಲದ (ಎನ್ಪಿಎ) ಪ್ರಮಾಣ ಶೇ 3.71 ರಿಂದ ಶೇ 5.73 ಕ್ಕೆ ಏರಿಕೆಯಾಗಿದೆ. ಇದರಿಂದ ನಷ್ಟ ಉಂಟಾಗಿದೆ ಎಂದು ಬ್ಯಾಂಕ್ ತಿಳಿಸಿದೆ.
ತ್ರೈಮಾಸಿಕದಲ್ಲಿ ಬ್ಯಾಂಕ್ ವರಮಾನ ₹ 57,720 ಕೋಟಿಯಿಂದ ₹ 68,436 ಕೋಟಿಗೆ ಏರಿಕೆಯಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.