ADVERTISEMENT

ಏರ್‌ಟೆಲ್ ಲಾಭ ಶೇ29 ಕುಸಿತ

​ಪ್ರಜಾವಾಣಿ ವಾರ್ತೆ
Published 11 ನವೆಂಬರ್ 2012, 19:30 IST
Last Updated 11 ನವೆಂಬರ್ 2012, 19:30 IST

ನವದೆಹಲಿ (ಪಿಟಿಐ): ದೇಶದ ಪ್ರಮುಖ ಮೊಬೈಲ್ ದೂರವಾಣಿ ಸೇವಾ ಸಂಸ್ಥೆ ಭಾರ್ತಿ ಏರ್‌ಟೆಲ್ ಪ್ರಸಕ್ತ ಹಣಕಾಸು ವರ್ಷದ ಎರಡನೇ ತ್ರೈಮಾಸಿಕದಲ್ಲಿ ರೂ721 ಕೋಟಿ ನಿವ್ವಳ ಲಾಭ ಗಳಿಸಿದ್ದು, ಶೇ 29ರಷ್ಟು ಕುಸಿತ ಕಂಡಿದೆ.

ಸಂಪರ್ಕ ಜಾಲ ವಿಸ್ತರಣೆ ಮತ್ತು ಕಾರ್ಯನಿರ್ವಹಣೆ ವೆಚ್ಚ ಹೆಚ್ಚಿರುವುದರಿಂದ ಕಂಪೆನಿಯ ಲಾಭ ಕಳೆದ 11 ತೈಮಾಸಿಕಗಳಿಂದ ಸತತ ಇಳಿಕೆ ಕಾಣುತ್ತಿದೆ. ನಷ್ಟ ಭರ್ತಿಗಾಗಿ ಕಂಪೆನಿ ಮುಂಬರುವ ದಿನಗಳಲ್ಲಿ ಮೊಬೈಲ್ ಕರೆ ದರ ಹೆಚ್ಚಿಸುವ ಸಾಧ್ಯತೆ ಇದೆ ಎಂದು ಮಾರುಕಟ್ಟೆ ತಜ್ಞರು ವಿಶ್ಲೇಷಿಸಿದ್ದಾರೆ.

2011-12ರ ಎರಡನೇ  ತ್ರೈಮಾಸಿಕದಲ್ಲಿ ಕಂಪೆನಿ ರೂ1,027 ಕೋಟಿ ನಿವ್ವಳ ಲಾಭ ಗಳಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.