ADVERTISEMENT

`ಐಎಂಎಫ್ ನೆರವು ಬೇಕಿಲ್ಲ'

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2013, 19:59 IST
Last Updated 1 ಸೆಪ್ಟೆಂಬರ್ 2013, 19:59 IST

ನವದೆಹಲಿ (ಪಿಟಿಐ): ರೂಪಾಯಿ ಮೌಲ್ಯ ಕುಸಿತ, ಜಿಡಿಪಿ ಇಳಿಕೆ ಇತ್ಯಾದಿ ಸಂಗತಿಗಳಿಂದ ಬಿಕ್ಕಟ್ಟಿಗೆ ಸಿಲುಕಿರುವ ದೇಶದ ಆರ್ಥಿಕತೆಯನ್ನು ಸಮತೋಲನ ಸ್ಥಿತಿಗೆ ತರಲು  ಅಂತರರಾಷ್ಟ್ರೀಯ ಹಣಕಾಸು ನಿಧಿಯ (ಐಎಂಎಫ್) ಸಹಾಯ ಕೇಳುವುದಿಲ್ಲ ಎಂದು ಕೇಂದ್ರ ಯೋಜನಾ ಆಯೋಗದ ಉಪಾಧ್ಯಕ್ಷ ಮೊಂಟೆಕ್ ಸಿಂಗ್ ಅಹ್ಲುವಾಲಿಯಾ ಹೇಳಿದ್ದಾರೆ.

ದೇಶಕ್ಕೆ ಎದುರಾಗಿರುವ ತಾತ್ಕಾಲಿಕ ಆರ್ಥಿಕ ಸವಾಲುಗಳನ್ನು ಎದುರಿಸಲು `ಐಎಂಎಫ್'ನ ನೆರವು ಅಗತ್ಯವಿಲ್ಲ ಎಂದು ಅವರು  ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.