ನವದೆಹಲಿ (ಪಿಟಿಐ): ಜಾಗತಿಕ ಆರ್ಥಿಕ ಅಸ್ಥಿರತೆಯಿಂದ ಷೇರುಪೇಟೆಗಳಲ್ಲಿ ತೀವ್ರ ಏರಿಳಿತ ಮುಂದುವರೆದಿದ್ದು, ಈ ಹಿನ್ನೆಲೆಯಲ್ಲಿ, `ಒಎನ್‌ಜಿಸಿ~ ಪೂರಕ ಸಾರ್ವಜನಿಕ ಕೊಡುಗೆ (ಎಫ್‌ಪಿಒ) ಪ್ರಕಟಣೆಯನ್ನು ಇನ್ನಷ್ಟು ದಿನಗಳ ಕಾಲ ಮುಂದೂಡಿದೆ.
`ಎಫ್‌ಪಿಒ~ ಮೂಲಕ ಶೇ 5ರಷ್ಟು ಪಾಲು ಬಿಡುಗಡೆ ಮಾಡಲು ಉದ್ದೇಶಿಸಿದ್ದ `ಒಎನ್‌ಜಿಸಿ~ ್ಙ12 ಸಾವಿರ ಕೋಟಿ ಸಂಗ್ರಹಿಸುವ ಗುರಿ ಹೊಂದಿತ್ತು. ಆದರೆ, ಸದ್ಯದ ಪರಿಸ್ಥಿತಿಯಲ್ಲಿ ಮಾರುಕಟ್ಟೆ ಪೂರಕವಾಗಿಲ್ಲ. ಹೀಗಾಗಿ ಎಫ್‌ಪಿಒ ಬಿಡುಗಡೆ ಮುಂದೂಡಲಾಗಿದೆ ಎಂದು ಹಣಕಾಸು ಸಚಿವಾಲಯದ ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.