ನವದೆಹಲಿ (ಪಿಟಿಐ): `ಕಚ್ಚಾ ತೈಲದ ಬೆಲೆ ಏರಿಕೆಯು ಕಳವಳಕಾರಿ ವಿದ್ಯಮಾನವಾಗಿದ್ದು, ಅದರಿಂದ ದೇಶದ ಅರ್ಥ ವ್ಯವಸ್ಥೆ ಮೇಲೆ ಆಗುವ ಪ್ರತಿಕೂಲ ಪರಿಣಾಮಗಳ ಬಗ್ಗೆ ಈ ಹಂತದಲ್ಲಿ ಅಂದಾಜು ಮಾಡುವುದು ಅವಸರದ ತೀರ್ಮಾನವಾಗಲಿದೆ~ ಎಂದು ಕೇಂದ್ರ ಹಣಕಾಸು ಸಚಿವ ಪ್ರಣವ್ ಮುಖರ್ಜಿ ಅಭಿಪ್ರಾಯಪಟ್ಟಿದ್ದಾರೆ.
ವಿವಾದಾತ್ಮಕ ಅಣ್ವಸ್ತ್ರ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಇರಾನ್ ಮತ್ತು ಪಶ್ಚಿಮದ ದೇಶಗಳ ಮಧ್ಯೆ ಹೆಚ್ಚಿರುವ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆಯಲ್ಲಿ, ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ದಿಢೀರನೆ ಏರಿಕೆ ಕಾಣುತ್ತಿದೆ.
ಬಾಹ್ಯ ಒತ್ತಡ ಇಲ್ಲ: ಇರಾನ್‌ನಿಂದ ಕಚ್ಚಾ ತೈಲ ಖರೀದಿ ಸ್ಥಗಿತಗೊಳಿಸುವಂತೆ ನಮ್ಮ ಮೇಲೆ ಬಾಹ್ಯ ಒತ್ತಡವೇನೂ ಇಲ್ಲ ಎಂದು ಪೆಟ್ರೋಲಿಯಂ ಸಚಿವ ಎಸ್. ಜೈಪಾಲ್ ರೆಡ್ಡಿ ಅಭಿಪ್ರಾಯಪಟ್ಟಿದ್ದಾರೆ.
ಭಾರತವು, ವಿಶ್ವಸಂಸ್ಥೆ ವಿಧಿಸುವ ಆರ್ಥಿಕ ದಿಗ್ಬಂಧನಕ್ಕೆ ಬದ್ಧವಾಗಿರುತ್ತದೆಯೇ ಹೊರತು, ಇತರ ಯಾವುದೇ ದೇಶಗಳ ಗುಂಪಿನ ದಿಗ್ಬಂಧನೆ ಪಾಲಿಸುವುದಿಲ್ಲ ಎಂದು ರೆಡ್ಡಿ ಸ್ಪಷ್ಟಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.