ADVERTISEMENT

ಕಾರು ದುಬಾರಿ?

​ಪ್ರಜಾವಾಣಿ ವಾರ್ತೆ
Published 26 ಜನವರಿ 2012, 19:30 IST
Last Updated 26 ಜನವರಿ 2012, 19:30 IST

ನವದೆಹಲಿ (ಪಿಟಿಐ): 2012-13ನೇ ಸಾಲಿನ ಬಜೆಟ್‌ನಲ್ಲಿ ಡೀಸೆಲ್ ಕಾರುಗಳ ಮೇಲಿನ ಅಬಕಾರಿ ತೆರಿಗೆ ಹೆಚ್ಚಿಸುವ ಕುರಿತು ಹಣಕಾಸು ಸಚಿವಾಲಯ ಪರಿಶೀಲನೆ ನಡೆಸುತ್ತಿದೆ.

ಸಬ್ಸಿಡಿ ದರದಲ್ಲಿ ನೀಡಲಾಗುತ್ತಿರುವ ಡೀಸೆಲ್ ಬಳಕೆ ತಗ್ಗಿಸಲು ಅಬಕಾರಿ ತೆರಿಗೆ ಹೆಚ್ಚಿಸುವಂತೆ ತೈಲ ಸಚಿವಾಲಯ ಹಣಕಾಸು ಸಚಿವಾಲಯಕ್ಕೆ ಪ್ರಸ್ತಾವ ಸಲ್ಲಿಸಿದೆ. ಆದರೆ, ಇದನ್ನು ಭಾರಿ ಕೈಗಾರಿಕೆಗಳ ಸಚಿವಾಲಯ ವಿರೋಧಿಸಿದೆ. 2011-12ನೇ ಸಾಲಿನಲ್ಲಿ ತೈಲ ಮಾರಾಟ ಕಂಪೆನಿಗಳು ಡೀಸೆಲ್ ಮಾರಾಟದ ಮೇಲೆ ರೂ 82  ಸಾವಿರ ಕೋಟಿ ನಷ್ಟ ಅನುಭವಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.