ADVERTISEMENT

ಕಾರು ಮಾರಾಟ ಕುಸಿತ, ದ್ವಿಚಕ್ರ ಪ್ರಗತಿ

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2011, 19:30 IST
Last Updated 12 ಅಕ್ಟೋಬರ್ 2011, 19:30 IST

ನವದೆಹಲಿ (ಪಿಟಿಐ): ಸೆಪ್ಟೆಂಬರ್ ತಿಂಗಳಲ್ಲಿ ದೇಶದ ಒಟ್ಟು ಕಾರುಗಳ ಮಾರಾಟ ಶೇ 1.8ರಷ್ಟು ಕುಸಿದಿದ್ದು, ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ 1,68,959 ರಿಂದ 1,65,925ಕ್ಕೆ ಇಳಿಕೆಯಾಗಿದೆ. 

ಆದರೆ, ಇದೇ ಅವಧಿಯಲ್ಲಿ ದ್ವಿಚಕ್ರ ವಾಹನ ಮಾರಾಟ ಶೇ 20ರಷ್ಟು ಚೇತರಿಸಿಕೊಂಡಿದೆ. ಸೆಪ್ಟೆಂಬರ್ ತಿಂಗಳಲ್ಲಿ ಒಟ್ಟು 9,33,465 ದ್ವಿಚಕ್ರವಾಹನಗಳನ್ನು ಮಾರಾಟ ಮಾಡಲಾಗಿದೆ ಎಂದು ಭಾರತೀಯ ವಾಹನ ತಯಾರಕರ ಒಕ್ಕೂಟ (ಎಸ್‌ಐಎಎಂ) ಹೇಳಿದೆ. 

ಕಳೆದ ವರ್ಷದ 59,836 ವಾಹನಗಳಿಗೆ ಹೋಲಿಸಿದರೆ ಪ್ರಸಕ್ತ ಅವಧಿಯಲ್ಲಿ ಒಟ್ಟು 70,634 ವಾಣಿಜ್ಯ ಬಳಕೆಯ ವಾಹನಗಳನ್ನು ಮಾರಾಟ ಮಾಡಲಾಗಿದೆ.  ಇದು 18ರಷ್ಟು ಏರಿಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.