ADVERTISEMENT

ಕೃಷಿ ಸಾಲ ರೂ 1.36 ಲಕ್ಷ ಕೋಟಿ ವಿತರಣೆ

​ಪ್ರಜಾವಾಣಿ ವಾರ್ತೆ
Published 9 ಅಕ್ಟೋಬರ್ 2012, 19:30 IST
Last Updated 9 ಅಕ್ಟೋಬರ್ 2012, 19:30 IST

ನವದೆಹಲಿ(ಪಿಟಿಐ): ಪ್ರಸಕ್ತ ಹಣಕಾಸು ವರ್ಷದ 1ನೇ ತ್ರೈಮಾಸಿಕ ಅವಧಿಯಲ್ಲಿ ರೂ 1.36 ಲಕ್ಷ ಕೋಟಿ ಕೃಷಿ ಸಾಲ ವಿತರಿಸಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

2012-13ರಲ್ಲಿ ಒಟ್ಟು ರೂ 5.75 ಲಕ್ಷ ಕೋಟಿ ಕೃಷಿ ಸಾಲ ವಿತರಿಸುವ ಗುರಿ ಇಟ್ಟುಕೊಳ್ಳಲಾಗಿದೆ. ಜೂನ್ ವೇಳೆಗಾಗಲೇ ರೂ 1,35,956 ಕೋಟಿ ಸಾಲ ನೀಡಲಾಗಿದೆ.

2011-12ರಲ್ಲಿ ರೂ 4.75 ಲಕ್ಷ ಕೋಟಿ ಕೃಷಿ ಸಾಲ ವಿತರಣೆ ಗುರಿಯನ್ನೂ ಮೀರಿ ರೂ 5.11 ಲಕ್ಷ ಕೋಟಿ ವಿತರಿಸಲಾಗಿದ್ದಿತು  ಎಂದು ಇಲ್ಲಿ ನಡೆಯುತ್ತಿರುವ `ಆರ್ಥಿಕ ಸಂಪಾದಕರ ಸಮ್ಮೇಳನ~ದ ಹಿನ್ನೆಲೆಯಲ್ಲಿ ಸಿದ್ಧಪಡಿಸಲಾದ ವರದಿಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.