ADVERTISEMENT

ಕೆಎಸ್‌ಆರ್‌ಟಿಸಿಗೆ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 15 ಫೆಬ್ರುವರಿ 2012, 19:30 IST
Last Updated 15 ಫೆಬ್ರುವರಿ 2012, 19:30 IST
ಕೆಎಸ್‌ಆರ್‌ಟಿಸಿಗೆ ಪ್ರಶಸ್ತಿ
ಕೆಎಸ್‌ಆರ್‌ಟಿಸಿಗೆ ಪ್ರಶಸ್ತಿ   

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ನಿಗಮದ 50 ವರ್ಷಗಳ ಸಾಧನೆ ಬಿಂಬಿಸುವ `ಸಾರಿಗೆಯ 50 ವರ್ಷಗಳು~ ಕೈಪಿಡಿಗೆ ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿ ನೀಡುವ ಚಿನ್ನದ ಪ್ರಶಸ್ತಿ ಲಭಿಸಿದೆ. 

 ಅಲ್ಲದೆ, ನಿಗಮದ ನಿಯತಕಾಲಿಕೆ `ಸಾರಿಗೆ ಸಂಪದ~ ಮತ್ತು ಕಾರ್ಪೊರೆಟ್ ಚಲನಚಿತ್ರಕ್ಕೆ ಬೆಳ್ಳಿ ಪ್ರಶಸ್ತಿ ಲಭಿಸಿದೆ.
ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿಯು ಮುಂಬೈನಲ್ಲಿ ಏರ್ಪಡಿಸಿದ್ದ ಆರನೇ ವಿಶ್ವ ಸಮ್ಮೇಳನದಲ್ಲಿ ನಿಗಮದ ಸಾರ್ವಜನಿಕ ಸಂಪರ್ಕಾಧಿಕಾರಿ ಟಿ.ಎಸ್. ಲತಾ ಅವರು ಪಾಕಿಸ್ತಾನದ ಮಾಜಿ ಕಾನೂನು ಸಚಿವ ಇಕ್ಬಾಲ್ ಹೈದರ್ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.