ADVERTISEMENT

ಗಣಿಗಾರಿಕೆ: ಕೇಂದ್ರ ತಂಡದಿಂದ 3ನೇ ಹಂತದ ಅಧ್ಯಯನ

​ಪ್ರಜಾವಾಣಿ ವಾರ್ತೆ
Published 4 ಏಪ್ರಿಲ್ 2012, 19:30 IST
Last Updated 4 ಏಪ್ರಿಲ್ 2012, 19:30 IST

ಬಳ್ಳಾರಿ: ಜಿಲ್ಲೆಯೂ ಒಳಗೊಂಡಂತೆ ರಾಜ್ಯದ ವಿವಿಧೆಡೆ ಅಕ್ರಮ ಗಣಿಗಾರಿಕೆಯಿಂದ ಉಂಟಾಗಿರುವ ಅರಣ್ಯ ನಾಶ ಮತ್ತು ಪರಿಸರದ ಮೇಲೆ ಆಗಿರುವ ದುಷ್ಪರಿಣಾಮ ಕುರಿತು ಅಧ್ಯಯನ ನಡೆಸುತ್ತಿರುವ ಕೇಂದ್ರ ಪರಿಸರ ಅಧ್ಯಯನ ತಂಡ ಇದೇ 5ರಿಂದ 14ವರೆಗೆ 3ನೇ ಹಂತದ ಅಧ್ಯಯನ ನಡೆಸಲು ಆಗಮಿಸಲಿದೆ.

ಜಿಲ್ಲೆಯಲ್ಲಿ ಅರಣ್ಯ ಮತ್ತು ಪರಿಸರ ಸಂರಕ್ಷಣೆ ನಿಯಮಗಳನ್ನು ಗಾಳಿಗೆ ತೂರಿ, ಅಕ್ರಮ ಗಣಿಗಾರಿಕೆ ನಡೆಸಿ ಅರಣ್ಯ ಪರಿಸರಕ್ಕೆ ತೀವ್ರ ಧಕ್ಕೆಯಾಗಿದೆ ಎಂದು ಧಾರವಾಡದ ಸಮಾಜ ಪರಿವರ್ತನ ಸಮುದಾಯ ಕಳೆದ ವರ್ಷ ಸುಪ್ರೀಂ ಕೊರ್ಟ್‌ಗೆ ಸಲ್ಲಿಸಿರುವುದಕ್ಕೆ ರಾಜ್ಯದಲ್ಲಿನ ಪರಿಸರ ನಾಶ ಕುರಿತು ವೈಜ್ಞಾನಿಕ ಅಧ್ಯಯನ ನಡೆಸಿ ವರದಿ ನೀಡುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರದ ಅರಣ್ಯ ಮತ್ತು ಪರಿಸರ ಸಚಿವಾಲಯಕ್ಕೆ ಸೂಚಿಸಿತ್ತು.

ಕೋರ್ಟ್ ಆದೇಶದ ಮೇರೆಗೆ ಕಳೆದ ವರ್ಷದ ಆಗಸ್ಟ್ ಮತ್ತು ಜನವರಿಯಲ್ಲಿ ಎರಡು ಹಂತಗಳಲ್ಲಿ ಅಧ್ಯಯನ ನಡೆ ವರದಿ ಸಲ್ಲಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.