ADVERTISEMENT

ಗೋಧಿ ಬೆಂಬಲ ಬೆಲೆ ರೂ 65 ಏರಿಕೆ

​ಪ್ರಜಾವಾಣಿ ವಾರ್ತೆ
Published 26 ಡಿಸೆಂಬರ್ 2012, 19:59 IST
Last Updated 26 ಡಿಸೆಂಬರ್ 2012, 19:59 IST

ನವದೆಹಲಿ (ಪಿಟಿಐ): ಕೇಂದ್ರ ಸರ್ಕಾರ ಪ್ರತಿ ಕ್ವಿಂಟಲ್ ಗೋಧಿಗೆ ನೀಡುತ್ತಿದ್ದ ಬೆಂಬಲ ಬೆಲೆಯಲ್ಲಿ ರೂ. 65ರಷ್ಟು ಹೆಚ್ಚಳ ಮಾಡಿದೆ. ಇದರಿಂದ ಗೋಧಿ ಕನಿಷ್ಠ ಬೆಲೆ ಕ್ವಿಂಟಲ್‌ಗೆ ರೂ. 1,350ಕ್ಕೆ ಏರಿದೆ.

ಆದರೆ, ಕೇಂದ್ರ ಕೃಷಿ ಸಚಿವಾಲಯ ಗೋಧಿಗೆ ಬೆಂಬಲ ಬೆಲೆಯನ್ನು ರೂ. 100ರಷ್ಟು ಹೆಚ್ಚಿಸಬೇಕು ಎಂದು ಪ್ರಸ್ತಾವನೆ ಸಲ್ಲಿಸಿದ್ದಿತು.

ಕ್ವಿಂಟಲ್ ಗೋಧಿ ಬೆಂಬಲ ಬೆಲೆಯನ್ನು ರೂ. 65ರಷ್ಟು ಹೆಚ್ಚಿಸಲು ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ತೀರ್ಮಾನ ಕೈಗೊಂಡಿದೆ ಎಂದು ಕೇಂದ್ರ ಹಣಕಾಸು ಸಚಿವ ಪಿ.ಚಿದಂಬರಂ ಅವರು ಬುಧವಾರ ಸುದ್ದಿಗಾರರಿಗೆ ಇಲ್ಲಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT