ADVERTISEMENT

ಜಾಗತಿಕ ಹೂಡಿಕೆ ಹೆಚ್ಚಳ

​ಪ್ರಜಾವಾಣಿ ವಾರ್ತೆ
Published 4 ಜೂನ್ 2013, 19:59 IST
Last Updated 4 ಜೂನ್ 2013, 19:59 IST

ನವದೆಹಲಿ(ಪಿಟಿಐ): ಜಾಗತಿಕ ಮಟ್ಟದಲ್ಲಿ ಬಂಡವಾಳ ಹೂಡಿಕೆಯಲ್ಲಿ ಭಾರತದ ಪಾಲು 2030ರ ವೇಳೆಗೆ ಎರಡು ಪಟ್ಟು ಹೆಚ್ಚಲಿದೆ ಎಂದು ವಿಶ್ವಬ್ಯಾಂಕ್ ಭವಿಷ್ಯ ನುಡಿದಿದೆ.

ಭಾರತವೂ ಸೇರಿದಂತೆ ಪ್ರವರ್ಧಮಾನಕ್ಕೆ ಬರುತ್ತಿರುವ ಇತರೆ ದೇಶಗಳಲ್ಲಿ ಹೂಡಿಕೆ ಮತ್ತು ಉಳಿತಾಯದ ರೂಢಿ ಗಣನೀಯವಾಗಿ ಹೆಚ್ಚುತ್ತಿದೆ. ಚೀನಾ ಹೊರತುಪಡಿಸಿದರೆ ಜಾಗತಿಕ ಹೂಡಿಕೆಯಲ್ಲಿ ಭಾರತ ಮುಂಚೂಣಿಯಲ್ಲಿದೆ ಎಂದು ವಿಶ್ವಬ್ಯಾಂಕ್‌ನ `ಜಾಗತಿಕ ಅಭಿವೃದ್ಧಿ ವರದಿ' ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.