ADVERTISEMENT

ಜಿಡಿಪಿ ಚೇತರಿಕೆ: ಮೋರ್ಗನ್ ಸ್ಟ್ಯಾನ್ಲಿ

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2012, 19:30 IST
Last Updated 3 ಡಿಸೆಂಬರ್ 2012, 19:30 IST

ನವದೆಹಲಿ (ಪಿಟಿಐ): ಜಾಗತಿಕ ಸಾಲ ಮೌಲ್ಯಮಾಪನ ಸಂಸ್ಥೆ ಮೋರ್ಗನ್ ಸ್ಟ್ಯಾನ್ಲಿ ಭಾರತದ ಒಟ್ಟಾರೆ ರಾಷ್ಟ್ರೀಯ ಉತ್ಪನ್ನ (ಜಿಡಿಪಿ) ಪ್ರಸಕ್ತ ಹಣಕಾಸು ವರ್ಷದಲ್ಲಿ ಶೇ 5.4ರಷ್ಟು ಇರಲಿದೆ ಎಂದು ಹೇಳಿದೆ.

ಜಾಗತಿಕ ಆರ್ಥಿಕ ಅಸ್ಥಿರತೆಯಿಂದ ಭಾರತದ `ಜಿಡಿಪಿ' ಶೇ 5.1ಕ್ಕೆ ಕುಸಿಯುವುದಾಗಿ ಕಳೆದ ಆಗಸ್ಟ್‌ನಲ್ಲಿ  ಮೋರ್ಗನ್ ಅಂದಾಜಿಸಿತ್ತು. ಆದರೆ, ವಿದೇಶಿ ನೇರ ಬಂಡವಾಳ ಹೂಡಿಕೆ (ಎಫ್‌ಡಿಐ) ಸೇರಿದಂತೆ ಸರ್ಕಾರ ಇತ್ತೀಚೆಗೆ ಕೈಗೊಂಡಿರುವ ಆರ್ಥಿಕ ಸುಧಾರಣಾ ಕ್ರಮಗಳಿಂದ ವೃದ್ಧಿ ದರ ಗಣನೀಯವಾಗಿ ಚೇತರಿಸಿಕೊಳ್ಳುತ್ತಿದ್ದು, ಮೂರನೆಯ ತ್ರೈಮಾಸಿಕದ ವೇಳೆಗೆ ಶೇ 5.4 ದಾಟಲಿದೆ ಎಂದಿದೆ.

ಕೇಂದ್ರ ಸರ್ಕಾರದ ಆರ್ಥಿಕ ಸುಧಾರಣಾ ಕ್ರಮಗಳ ಜತೆಗೆ, ಹಣದುಬ್ಬರ, ಬಡ್ಡಿ ದರ ಏರಿಕೆ, ಡಾಲರ್ ಎದುರು ರೂಪಾಯಿ ವಿನಿಮಯ ಮೌಲ್ಯ ಕುಸಿತ, ವಿತ್ತೀಯ ಕೊರತೆ ಇತ್ಯಾದಿ ಸಂಗತಿಗಳು `ಜಿಡಿಪಿ' ಮೇಲೆ ಪ್ರತಿಕೂಲ ಪರಿಣಾಮ ಬೀರಿವೆ ಎಂದೂ ತನ್ನ  ಪರಿಷ್ಕೃತ ವರದಿಯಲ್ಲಿ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.