ADVERTISEMENT

ಟೆಲಿಕಾಂ ಕಂಪೆನಿಗಳಿಗೆ ಪರವಾನಗಿ ಶುಲ್ಕ ವಾಪಸು

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2012, 19:30 IST
Last Updated 8 ಅಕ್ಟೋಬರ್ 2012, 19:30 IST

ನವದೆಹಲಿ (ಪಿಟಿಐ): 2ಜಿ ಹಗರಣಕ್ಕೆ ಸಂಬಂಧಿಸಿ ಪರವಾನಗಿ ರದ್ದುಗೊಂಡಿರುವ, ಆದರೆ ಯಾವುದೇ ಕ್ರಿಮಿನಲ್ ಆರೋಪ ಹೊಂದಿರದ ಟೆಲಿಕಾಂ ಕಂಪೆನಿಗಳಿಗೆ ಪರವಾನಗಿ ಶುಲ್ಕ ಹಿಂದಿರುಗಿಸಲು ಸರ್ಕಾರ ನಿರ್ಧರಿಸಿದೆ.

ಹಣಕಾಸು ಸಚಿವ ಪಿ. ಚಿದಂಬರಂ ಅವರ ನೇತೃತ್ವದಲ್ಲಿ ಸೋಮವಾರ ಸಭೆ ಸೇರಿದ್ದ ಸಚಿವರ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.

ಎ. ರಾಜಾ ಟೆಲಿಕಾಂ ಸಚಿವರಾಗಿದ್ದ ಅವಧಿಯಲ್ಲಿ ಮಂಜೂರು ಮಾಡಲಾಗಿದ್ದ ಎಲ್ಲ ಪರವಾನಗಿಗಳನ್ನು ಸುಪ್ರೀಂಕೋರ್ಟ್ ಫೆಬ್ರುವರಿಯಲ್ಲಿ ರದ್ದುಗೊಳಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.