ADVERTISEMENT

ಟೋಯೊಟಾ ಬೀಗಮುದ್ರೆ: ನಿರ್ಧಾರಕ್ಕೆ ಬಾರದ ಸಂಧಾನ ಸಭೆ

​ಪ್ರಜಾವಾಣಿ ವಾರ್ತೆ
Published 18 ಮಾರ್ಚ್ 2014, 19:30 IST
Last Updated 18 ಮಾರ್ಚ್ 2014, 19:30 IST

ಬೆಂಗಳೂರು: ಟೋಯೊಟಾ ಕಿರ್ಲೋಸ್ಕರ್‌ ಮೋಟಾರ್‌ ಪ್ರೈ.ಲಿ. ಲಾಕ್‌ಔಟ್‌ ಘೋಷಿಸಿರುವ ಸಂಬಂಧ ಕಂಪೆನಿಯ ಆಡಳಿತ ಮಂಡಳಿ ಹಾಗೂ ಕಾರ್ಮಿಕ ಸಂಘದ ಪ್ರತಿನಿಧಿಗಳೊಂದಿಗೆ ಕಾರ್ಮಿಕ ಸಚಿವ ಪರಮೇಶ್ವರ ನಾಯಕ್‌ ಅವರು ನಡೆಸಿದ ಸಭೆಯಲ್ಲಿ ಯಾವುದೇ ನಿರ್ಧಾರ ಕೈಗೊಂಡಿಲ್ಲ.

ವಿಧಾನಸೌಧದಲ್ಲಿ ಮಂಗಳವಾರ ನಡೆಸಿದ ಸಭೆಯಲ್ಲಿ ಕಂಪೆನಿ ಲಾಕ್‌ಔಟ್‌ ಘೋಷಿಸಿರುವ ಬಗ್ಗೆ ಚರ್ಚಿಸಲಾಯಿತು. ಈ ಸಂಬಂಧ ಆಡಳಿತ ಮಂಡಳಿ ಹಾಗೂ ಕಾರ್ಮಿಕ ಸಂಘದ ಪ್ರತಿನಿಧಿಗಳಿಂದ ಒಮ್ಮತದ ನಿರ್ಧಾರ ಬಾರದ ಹಿನ್ನೆಲೆಯಲ್ಲಿ ಸಭೆಯನ್ನು ನಾಳೆಗೆ ಮುಂದೂಡ­ಲಾಗಿದೆ ಎಂದು ಕಾರ್ಮಿಕ ಇಲಾಖೆಯ ಆಯುಕ್ತ ಜೆ.ಟಿ. ಜಿಂಕಲಪ್ಪ ತಿಳಿಸಿದರು.

ಬುಧವಾರ ಮಧ್ಯಾಹ್ನ ವಿಧಾನಸೌ­ಧದಲ್ಲಿ ಮತ್ತೆ ಸಭೆ ನಡೆಸಲು ನಿರ್ಧರಿಸ­ಲಾಗಿದೆ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.