ADVERTISEMENT

ತಗ್ಗಿದ ವಿದೇಶಿ ಹೂಡಿಕೆ ಮೊತ್ತ

ಪಿಟಿಐ
Published 2 ಏಪ್ರಿಲ್ 2018, 19:30 IST
Last Updated 2 ಏಪ್ರಿಲ್ 2018, 19:30 IST

ನವದೆಹಲಿ: 2017–18ನೇ ಆರ್ಥಿಕ ವರ್ಷದಲ್ಲಿ ವಿದೇಶಿ ಹೂಡಿಕೆದಾರರು ₹ 26 ಸಾವಿರ ಕೋಟಿ ಹೂಡಿಕೆ ಮಾಡಿದ್ದಾರೆ.

2016–17ರಲ್ಲಿ ₹ 55,700 ಕೋಟಿ ಹೂಡಿಕೆ ಮಾಡಿದ್ದರು. ಇದಕ್ಕೆ ಹೋಲಿಸಿದರೆ ಹೂಡಿಕೆ ಮೊತ್ತ ಅರ್ಧದಷ್ಟು ಕಡಿಮೆ ಆಗಿದೆ.

ಅಮೆರಿಕದ ಫೆಡರಲ್‌ ರಿಸರ್ವ್ ಮಾರುಕಟ್ಟೆ ನಿರೀಕ್ಷೆಗಿಂತಲೂ ಬಹಳ ಬೇಗ ಬಡ್ಡಿದರ ಏರಿಕೆ ಮಾಡಲಿದೆ ಎನ್ನುವ ಆತಂಕ ಹಾಗೂ ಭಾರತದ ಷೇರುಗಳ ಮೌಲ್ಯ ಗರಿಷ್ಠ ಮಟ್ಟದಲ್ಲಿ ಇರುವುದು ಹೂಡಿಕೆಯನ್ನು ತಗ್ಗುವಂತೆ ಮಾಡಿದೆ ಎಂದು ತಜ್ಞರು ಹೇಳಿದ್ದಾರೆ

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.