ADVERTISEMENT

ತೆರಿಗೆ ಸಂಗ್ರಹ ನಿರೀಕ್ಷೆಗಿಂತ ಕಡಿಮೆ

​ಪ್ರಜಾವಾಣಿ ವಾರ್ತೆ
Published 10 ಸೆಪ್ಟೆಂಬರ್ 2013, 19:59 IST
Last Updated 10 ಸೆಪ್ಟೆಂಬರ್ 2013, 19:59 IST

ನವದೆಹಲಿ(ಪಿಟಿಐ): ಕಳೆದ ಹಣಕಾಸು ವರ್ಷದಲ್ಲಿನ ಒಟ್ಟಾರೆ ತೆರಿಗೆ ಸಂಗ್ರಹ ಮುಂಗಡಪತ್ರದಲ್ಲಿನ ಅಂದಾಜಿಗಿಂತ ₨40,893 ಕೋಟಿಗಳಷ್ಟು  ಕಡಿಮೆಯಾಗಿದೆ.
ಮುಂಗಡಪತ್ರದಲ್ಲಿ ₨11.77 ಲಕ್ಷ ಕೋಟಿಗಳಷ್ಟು ತೆರಿಗೆ ಸಂಗ್ರಹ ಅಂದಾಜು ಮಾಡಲಾಗಿತ್ತು. ಆದರೆ, ಮಂದಗತಿ ಆರ್ಥಿಕ ಪ್ರಗತಿಯ ಕಾರಣದಿಂದಾಗಿ ಒಟ್ಟಾರೆ ತೆರಿಗೆ ಸಂಗ್ರಹದಲ್ಲಿ ಕುಸಿತವಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ಹಾಗಿದ್ದೂ ಸೇವಾ ತೆರಿಗೆ ಸಂಗ್ರಹ ಪ್ರಮಾಣ ಮಾತ್ರ ನಿರೀಕ್ಷೆಗಿಂತಲೂ ಹೆಚ್ಚು ಸಂಗ್ರಹವಾಗಿದೆ. ಆದರೆ, ಕಂಪೆನಿ ತೆರಿಗೆ ಮತ್ತು ಅಬಕಾರಿ ಸುಂಕ ಸಂಗ್ರಹ ಕಡಿಮೆಯಾಗಿದೆ ಎಂದು ಸಚಿವಾಲಯ ವಿವರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.