ನವದೆಹಲಿ (ಪಿಟಿಐ): ಪ್ರಸಕ್ತ ವರ್ಷದ ಮೊದಲ ಎರಡು ತ್ರೈಮಾಸಿಕಗಳಲ್ಲಿ ದೇಶದ ರಾಜಧಾನಿ ದೆಹಲಿಯಲ್ಲಿ ಗರಿಷ್ಠ ಮಟ್ಟದ ಉದ್ಯೋಗಾವಕಾಶಗಳು ಸೃಷ್ಟಿಯಾಗಿವೆ ಎಂದು ಭಾರತೀಯ ವಾಣಿಜ್ಯೋದ್ಯಮ ಮಹಾಸಂಘ(ಅಸೋಚಾಂ) ನಡೆಸಿದ ಸಮೀಕ್ಷೆ ತಿಳಿಸಿದೆ.
ಜನವರಿ-ಮಾರ್ಚ್ ಮತ್ತು ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ದೇಶದಾದ್ಯಂತ ಒಟ್ಟು 2.7 ಲಕ್ಷ ಉದ್ಯೋಗಾವಕಾಶ ಸೃಷ್ಟಿಯಾಗಿವೆ. ಇದರಲ್ಲಿ ದೆಹಲಿಯಲ್ಲಿಯೇ 64,500 ಮಂದಿಗೆ ಉದ್ಯೋಗ ಲಭಿಸಿವೆ. ಉದ್ಯೋಗ ಲಭ್ಯತೆಯ ನಂತರದ ಸ್ಥಾನಗಳಲ್ಲಿ ಬೆಂಗಳೂರು, ಪುಣೆ ಮತ್ತು ಚೆನ್ನೈ ನಗರಗಳಿವೆ.
ಎರಡನೇ ಹಂತದ ನಗರಗಳಲ್ಲಿ ಗರಿಷ್ಠ ಉದ್ಯೋಗಾವಕಾಶ ಸೃಷ್ಟಿಯಾಗಿರುವುದು ಲಕ್ನೊದಲ್ಲಿ. ಇಲ್ಲಿ 1,698 ಹೊಸ ಉದ್ಯೋಗ ಸೃಷ್ಟಿಯಾಗಿವೆ. ನಂತರದ ಸ್ಥಾನಗಳಲ್ಲಿ ಚಂಡೀಗಢ, ವಡೋದರ, ಜೈಪುರ ಮತ್ತು ಸೂರತ್‌ನಗರಗಳಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.