ಪುಣೆ (ಪಿಟಿಐ): ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ನಿಗದಿಪಡಿಸಿದ ಮಾನದಂಡಗಳನ್ನು ಅನುಸರಿಸಿದ, ಬ್ಯಾಂಕಿಂಗ್ ಕ್ಷೇತ್ರದ ನಿಯಮಗಳನ್ನು ಪರಿಪೂರ್ಣವಾಗಿ ಪಾಲಿಸಿದ ಸಂಸ್ಥೆಗಳಿಗಷ್ಟೇ ಹೊಸದಾಗಿ `ಬ್ಯಾಂಕ್ ಆರಂಭ~ಕ್ಕೆ ಅನುಮತಿ ನೀಡಲಾಗುವುದು ಎಂದು `ಆರ್‌ಬಿಐ~ ಗವರ್ನರ್ ಡಿ.ಸುಬ್ಬರಾವ್ ಇಲ್ಲಿ ಹೇಳಿದರು.
ಹೊಸ ಬ್ಯಾಂಕ್ ಆರಂಭಕ್ಕೆ ಮಾರ್ಗಸೂಚಿ ರೂಪಿಸುವಂತೆ ಮತ್ತು ಬ್ಯಾಂಕ್ ಆರಂಭಿಸಲು ಅನುಮತಿ ಕೋರಿದ ಅರ್ಜಿಗಳನ್ನು ಸ್ವೀಕರಿಸುವಂತೆ ಆರ್‌ಬಿಐಗೆ ಪತ್ರ ಬರೆಯಲಾಗಿದೆ ಎಂದು ಹಣಕಾಸು ಸಚಿವ ಪಿ.ಚಿದಂಬರಂ ಹೇಳಿದ ಮರುದಿನವೇ ಸುಬ್ಬರಾವ್ ಅವರ ನೇರ ಪ್ರತಿಕ್ರಿಯೆಯೂ ಹೊರಬಿದ್ದಿದೆ.
ಹೊಸ ಬ್ಯಾಂಕ್‌ಗಳಿಗೆ ಅನುಮತಿ ನೀಡುವ ವಿಚಾರದಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಆದರೆ, ನಿಯಮಬದ್ಧವಾಗಿರದ ಅರ್ಜಿಗಳಿಗೆ ಅನುಮತಿ ನೀಡಲು ಸಾಧ್ಯವೇ ಇಲ್ಲ ಎಂದು ಸುಬ್ಬರಾವ್ ಸ್ಪಷ್ಟಪಡಿಸಿದ್ದಾರೆ.
ಹೊಸ ಬ್ಯಾಂಕ್ ಆರಂಭ ಪ್ರಕ್ರಿಯೆಗೆ ಸಂಬಂಧಿಸಿ ಮಾರ್ಗಸೂಚಿಯನ್ನು ಆರ್‌ಬಿಐ 2011ರ ಆಗಸ್ಟ್‌ನಲ್ಲಿ ಪ್ರಕಟಿಸಿದ್ದಿತು. ಇದಕ್ಕೂ ಮುನ್ನ 2002ರಲ್ಲಿ ಮಾತ್ರವೇ ಖಾಸಗಿ ಕ್ಷೇತ್ರದಲ್ಲಿ ಹೊಸ ಬ್ಯಾಂಕ್ ಆರಂಭಕ್ಕೆ ಆರ್‌ಬಿಐ ಅನುಮತಿ ನೀಡಿದ್ದಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.