ADVERTISEMENT

ನೇರ ತೆರಿಗೆ ಸಂಗ್ರಹ ಹೆಚ್ಚಳ

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2013, 19:30 IST
Last Updated 12 ಡಿಸೆಂಬರ್ 2013, 19:30 IST

ನವದೆಹಲಿ(ಪಿಟಿಐ): ಮಂದಗತಿ ಆರ್ಥಿಕ ಪ್ರಗತಿ ನಡುವೆಯೂ ಪ್ರಸಕ್ತ ಹಣಕಾಸು ವರ್ಷದಲ್ಲಿ ಈವರೆಗೆ ಒಟ್ಟಾರೆ ನೇರ ತೆರಿಗೆ ಸಂಗ್ರಹದಲ್ಲಿ ಶೇ 13.18ರಷ್ಟು ಹೆಚ್ಚಳ ಕಂಡುಬಂದಿದೆ.

ಏಪ್ರಿಲ್‌, ನವೆಂಬರ್‌ ಅವಧಿಯಲ್ಲಿ ರೂ3.68 ಲಕ್ಷ ಕೋಟಿ ನೇರ ತೆರಿಗೆ ಸಂಗ್ರಹವಾಗಿದೆ. ಹಿಂದಿನ ಹಣಕಾಸು ವರ್ಷ ಇದೇ ಅವಧಿಯಲ್ಲಿ ರೂ3.25 ಲಕ್ಷ ಕೋಟಿ ಸಂಗ್ರಹವಾಗಿತ್ತು. ಈ ಬಾರಿ ಕಾರ್ಪೊರೇಟ್‌ ತೆರಿಗೆ ಸಂಗ್ರಹದಲ್ಲಿ ಶೇ 9.66, ವೈಯಕ್ತಿಕ ಆದಾಯ ತೆರಿಗೆ ಸಂಗ್ರಹದಲ್ಲಿ ಶೇ 19.60 ಮತ್ತು ಸಂಪತ್ತು ತೆರಿಗೆ ಸಂಗ್ರಹದಲ್ಲಿ ಶೇ 13.38ರಷ್ಟು ಹೆಚ್ಚಳ ಕಂಡುಬಂದಿದೆ.

ಕೇಂದ್ರ ಸರ್ಕಾರ ಪ್ರಸಕ್ತ ಹಣಕಾಸು ವರ್ಷಕ್ಕೆ ರೂ6.68 ಲಕ್ಷ ಕೋಟಿ ನೇರ ತೆರಿಗೆ ಸಂಗ್ರಹದ ಗುರಿ ಇಟ್ಟುಕೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.