ನವದೆಹಲಿ (ಪಿಟಿಐ/ಐಎಎನ್ಎಸ್): ಹಣದುಬ್ಬರ ಎರಡಂಕಿ ತಲುಪುತ್ತಿರುವ ಈ ಹೊತ್ತಿನಲ್ಲಿ ಪೆಟ್ರೋಲ್ ಬೆಲೆಯನ್ನು ಲೀಟರ್‌ಗೆ 3 ರೂಪಾಯಿಯಷ್ಟು ಹೆಚ್ಚಿಸಲಾಗಿದ್ದು, ನೂತನ ದರವು ಗುರುವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ.
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆಗಳು ಹೆಚ್ಚಳಗೊಂಡಿರುವುದರಿಂದ ಹಾಗೂ ಅಮೆರಿಕ ಡಾಲರ್ ಎದುರು ಭಾರತದ ರೂಪಾಯಿ ಅಪಮೌಲ್ಯಗೊಂಡಿರುವುದರಿಂದ ತೈಲ ಕಂಪೆನಿಗಳಾದ ಇಂಡಿಯನ್ ಆಯಿಲ್ ಕಾರ್ಪೋರೇಷನ್(ಐಓಸಿ), ಭಾರತ್ ಪೆಟ್ರೋಲಿಯಂ ಕಾರ್ಪೋರೇಷನ್ (ಬಿಪಿಸಿಎಲ್) ಮತ್ತು ಹಿಂದೂಸ್ಥಾನ್ ಪೆಟ್ರೋಲಿಯಂ (ಎಚ್‌ಪಿಸಿಎಲ್)ಗಳು ಸದ್ಯ ಲೀಟರ್‌ವೊಂದಕ್ಕೆ 2.61 ರೂನಷ್ಟು ನಷ್ಟ ಅನುಭವಿಸುತ್ತಿವೆ. ಇದಕ್ಕೆ ಸ್ಥಳೀಯ ತೆರಿಗೆ ಸೇರಿಸಿದರೆ ಇದರ ಒಟ್ಟಾರೆ 3 ರೂ ದಾಟಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದೇಶದ ವಿವಿಧ ಭಾಗಗಳಲ್ಲಿ ಪೆಟ್ರೋಲ್ ಬೆಲೆ ಏರಿಕೆ ಬೇರೆ ಬೇರೆ ಆಗಲಿದೆ ಎಂದು ಹೇಳಲಾಗಿದೆ.
ಮೇ 15 ರಂದು ಪೆಟ್ರೋಲ್ ಬೆಲೆಯನ್ನು ಲೀಟರ್‌ಗೆ 5 ರೂ ಹೆಚ್ಚಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.