ADVERTISEMENT

ಪೇಟೆಯಲ್ಲಿ ಸಕಾರಾತ್ಮಕ ವಹಿವಾಟು

ಪಿಟಿಐ
Published 4 ಅಕ್ಟೋಬರ್ 2017, 19:30 IST
Last Updated 4 ಅಕ್ಟೋಬರ್ 2017, 19:30 IST

ಮುಂಬೈ: ಆರ್‌ಬಿಐ ಹಣಕಾಸು ನೀತಿ ಪರಾಮರ್ಶೆಯ ಪ್ರಭಾವಕ್ಕೆ ಒಳಗಾಗಿ ದೇಶದ ಷೇರುಪೇಟೆಗಳಲ್ಲಿ ಬುಧವಾರ ಸಕಾರಾತ್ಮಕ ವಹಿವಾಟು ನಡೆಯಿತು.

ಹೂಡಿಕೆದಾರರ ನಿರೀಕ್ಷೆಯಂತೆಯೇ ಆರ್‌ಬಿಐ ಬಡ್ಡಿದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ. ಇದು ಸೂಚ್ಯಂಕದ ಏರಿಕೆಗೆ ನೆರವಾಯಿತು ಎಂದು ಪರಿಣತರು ಹೇಳಿದ್ದಾರೆ.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ (ಬಿಎಸ್ಇ) 174 ಅಂಶ ಏರಿಕೆ ಕಂಡು, 31,671 ಅಂಶಗಳಲ್ಲಿ ಮತ್ತು ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ (ಎನ್‌ಎಸ್ಇ) ನಿಫ್ಟಿ 55 ಅಂಶ ಹೆಚ್ಚಾಗಿ 9,914 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.