ADVERTISEMENT

ಫ್ಲಿಪ್‌ಕಾರ್ಟ್‌ನಿಂದ ಹ್ಯಾಕಥಾನ್‌

​ಪ್ರಜಾವಾಣಿ ವಾರ್ತೆ
Published 7 ಜೂನ್ 2017, 19:30 IST
Last Updated 7 ಜೂನ್ 2017, 19:30 IST
ಫ್ಲಿಪ್‌ಕಾರ್ಟ್‌ನಿಂದ ಹ್ಯಾಕಥಾನ್‌
ಫ್ಲಿಪ್‌ಕಾರ್ಟ್‌ನಿಂದ ಹ್ಯಾಕಥಾನ್‌   

ಬೆಂಗಳೂರು: ಬೆಂಗಳೂರಿನ ಆನ್‌ಲೈನ್‌ ಮಾರಾಟ ಸಂಸ್ಥೆ ಫ್ಲಿಪ್‌ಕಾರ್ಟ್ ತನ್ನ ಹತ್ತನೇ ವಾರ್ಷಿಕೋತ್ಸವದ ಅಂಗವಾಗಿ ನಗರದ ಸಂಚಾರ ದಟ್ಟಣೆ ಸಮಸ್ಯೆ ಪರಿಹಾರಕ್ಕಾಗಿ ಗ್ರಿಡ್‌ಲಾಕ್‌ ಹ್ಯಾಕಥಾನ್ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

ಇದೇ  21ರವರೆಗೆ ಈ ಕಾರ್ಯಕ್ರಮ ನಡೆಯಲಿದೆ. ‘ಪ್ರಜಾವಾಣಿ’ಯೊಂದಿಗೆ ಮಾತನಾಡಿದ ಸಂಸ್ಥೆಯ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ದೀಪಕ್‌ ರಾಜಣ್ಣ ಅವರು, ‘ನಮ್ಮ ಸಂಸ್ಥೆ ಹುಟ್ಟಿದ್ದು, ಬೆಳೆದಿದ್ದು ಬೆಂಗಳೂರಿನಿಂದಲೇ. ಹೀಗಾಗಿ ನಮ್ಮ ನಗರಕ್ಕೆ ಏನಾದರೂ ಕೊಡುಗೆ ನೀಡಬೇಕು ಎಂಬ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ’ ಎಂದು ತಿಳಿಸಿದರು.

‘ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸುವವರು ಫ್ಲಿಪ್‌ಕಾರ್ಟ್‌ ಸ್ಟೋರಿಸ್‌ನಲ್ಲಿ ನೋಂದಣಿ ಮಾಡಿಕೊಳ್ಳಬೇಕು. ಸಂಚಾರ ದಟ್ಟಣೆ ಸಮಸ್ಯೆ ಎದುರಿಸುತ್ತಿರುವ ಸಂಸ್ಥೆಗಳ ಮುಖ್ಯಸ್ಥರು, ಉದ್ಯೋಗಿಗಳು ಸೇರಿದಂತೆ ಸಾರ್ವಜನಿಕರು ಮುಕ್ತವಾಗಿ ಭಾಗವಹಿಸಿ ಸಲಹೆಗಳನ್ನು ನೀಡಬಹುದು.

ADVERTISEMENT

ಸಂಚಾರ ದಟ್ಟಣೆ ಸಮಸ್ಯೆ ಎದುರಿಸುತ್ತಿರುವ ಬೆಂಗಳೂರಿನ ಎಲ್ಲ ಪ್ರದೇಶಗಳನ್ನೂ ದೃಷ್ಟಿಯಲ್ಲಿ ಇರಿಸಿಕೊಂಡು ಈ ಕಾರ್ಯಕ್ರಮ ಆಯೋಜಿಸಿದ್ದೇವೆ.

‘ಎಲ್ಲರ ಸಲಹೆಗಳನ್ನು ಪಡೆದು ಸಂಚಾರ ದಟ್ಟಣೆ ಸಮಸ್ಯೆಗೆ ಪರಿಹಾರ ಸೂಚಿಸುವ ಸಲಹೆಗಳನ್ನು ಕಾರ್ಯರೂಪಕ್ಕೆ ತರುವುದು ನಮ್ಮ ಈ ಗ್ರಿಡ್‌ ಲಾಕ್‌ ಹ್ಯಾಕಥಾನ್‌ ಕಾರ್ಯಕ್ರಮದ ಉದ್ದೇಶವಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.