ADVERTISEMENT

ಬಂಡವಾಳ ನೆರವಿಗೆ ಸರ್ಕಾರ ಬದ್ಧ

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2012, 19:30 IST
Last Updated 19 ಫೆಬ್ರುವರಿ 2012, 19:30 IST

ಗುಡಗಾಂವ್ (ಪಿಟಿಐ): ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳಿಗೆ ಅಗತ್ಯವಿರುವಷ್ಟು ಬಂಡವಾಳ ನೆರವು ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಪ್ರಣವ್ ಮುಖರ್ಜಿ ಸ್ಪಷ್ಟಪಡಿಸಿದ್ದಾರೆ.

ಜಾಗತಿಕ ಆರ್ಥಿಕ ಅಸ್ಥಿರತೆಯಿಂದ ಕೆಲವು ಬ್ಯಾಂಕುಗಳು ಬಂಡವಾಳದ ಕೊರತೆ ಎದುರಿಸುತ್ತಿವೆ. ಈಗಾಗಲೇ ಬ್ಯಾಂಕುಗಳಿಗೆ ನೆರವು ನೀಡುವುದಾಗಿ ಸರ್ಕಾರ ಹೇಳಿದೆ. ಇದಕ್ಕೆ ಬದ್ಧವಾಗಿ ನಡೆದುಕೊಳ್ಳಲಿದೆ ಎಂದು ಹೇಳಿದ್ದಾರೆ. `ಬಾಸೆಲ್-3~ ನಿಯಮಗಳ ಪ್ರಕಾರ ಸರ್ಕಾರವು ಎಲ್ಲ ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳಿಗೆ ಬಂಡವಾಳ ನೆರವು ಒದಗಿಸಲಿದೆ ಎಂದರು.

ಬ್ಯಾಂಕ್ ಆಫ್ ಬರೋಡಾ, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಓರಿಯಂಟಲ್ ಬ್ಯಾಂಕ್ ಆಫ್ ಕಾಮರ್ಸ್, ಯುಸಿಒ ಬ್ಯಾಂಕ್, ದೇನಾ ಬ್ಯಾಂಕ್ ಸೇರಿದಂತೆ ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳಿಗೆ 2010-11ರಲ್ಲಿ ಸರ್ಕಾರ ರೂ. 20,157 ಕೋಟಿಗಳಷ್ಟು ಬಂಡವಾಳ ನೆರವು ಒದಗಿಸಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಭಾರತೀಯ ಸ್ಟೇಟ್ ಬ್ಯಾಂಕ್‌ಗೆ (ಎಸ್‌ಬಿಐ) ರೂ. 7,900 ಕೋಟಿ ನೆರವು ನೀಡಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.