ADVERTISEMENT

ಬಿಟ್‌ಕಾಯಿನ್‌: ಹೈಕೋರ್ಟ್‌ಗೆ ಮತ್ತೊಂದು ಅರ್ಜಿ

​ಪ್ರಜಾವಾಣಿ ವಾರ್ತೆ
Published 5 ಮೇ 2018, 19:51 IST
Last Updated 5 ಮೇ 2018, 19:51 IST
ಬಿಟ್‌ಕಾಯಿನ್‌: ಹೈಕೋರ್ಟ್‌ಗೆ ಮತ್ತೊಂದು ಅರ್ಜಿ
ಬಿಟ್‌ಕಾಯಿನ್‌: ಹೈಕೋರ್ಟ್‌ಗೆ ಮತ್ತೊಂದು ಅರ್ಜಿ   

ನವದೆಹಲಿ: ಡಿಜಿಟಲ್‌ ಕರೆನ್ಸಿಗಳ ವಹಿವಾಟಿಗೆ ಸಂಬಂಧಿಸಿದಂತೆ ಆರ್‌ಬಿಐ ಹೇರಿರುವ ನಿರ್ಬಂಧವನ್ನು ಪ್ರಶ್ನಿಸಿ ಫ್ಲೈನ್‌ಸ್ಟೋನ್‌ ಟೆಕ್ನಾಲಜೀಸ್‌ ಪ್ರೈವೇಟ್‌ ಲಿಮಿಟೆಡ್ ಕಂಪನಿ ಹೈಕೋರ್ಟ್‌ ಮೆಟ್ಟಿಲೇರಿದೆ.

ಈ ರೀತಿಯ ಕರೆನ್ಸಿಗಳ ವಹಿವಾಟಿಗೆ ಹಣಕಾಸು ಸಂಸ್ಥೆಗಳು ಯಾವುದೇ ಬಗೆಯ ಸೇವೆಗಳನ್ನು ನೀಡಬಾರದು ಎಂದು ಆರ್‌ಬಿಐ ನಿರ್ಬಂಧ ವಿಧಿಸಿದೆ.

ನಿರ್ಬಂಧ ಹೇರಲು ಯಾವುದೇ ನಿರ್ದಿಷ್ಟ ಕಾರಣ ನೀಡಿಲ್ಲ. ಹೀಗಾಗಿ ಆರ್‌ಬಿಐ ಹೊರಡಿಸಿರುವ ಸುತ್ತೋಲೆಯನ್ನು ರದ್ದುಪಡಿಸುವಂತೆ ಹೈಕೋರ್ಟ್‌ಗೆ ಮನವಿ ಮಾಡಿದೆ.

ADVERTISEMENT

ಇದಕ್ಕೂ ಗುಜರಾತ್‌ನ ಕಾಳಿ ಡಿಜಿಟಲ್‌ ಇಕೊಸಿಸ್ಟಮ್ಸ್‌ ಪ್ರೈವೇಟ್‌ ಲಿಮಿಟೆಡ್‌ ಆರ್‌ಬಿಐ ಕ್ರಮವನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.