ADVERTISEMENT

ಬ್ಯಾಂಕ್‌ಗಳ ಪಾತ್ರ; ಪ್ರಣವ್ ಶ್ಲಾಘನೆ

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2011, 19:30 IST
Last Updated 21 ಅಕ್ಟೋಬರ್ 2011, 19:30 IST

ನವದೆಹಲಿ (ಪಿಟಿಐ): ಜಾಗತಿಕ ಹಣಕಾಸಿನ ಬಿಕ್ಕಟ್ಟಿನ ಸಂದರ್ಭದಲ್ಲಿ ದೇಶಿ ಬ್ಯಾಂಕ್‌ಗಳು ಆರ್ಥಿಕ ಚಟುವಟಿಕೆಗಳಿಗೆ ಅಗತ್ಯವಾದ ಹಣಕಾಸಿನ ಅಗತ್ಯಗಳನ್ನು ಸಮರ್ಪಕವಾಗಿ ಒದಗಿಸುವ ಮೂಲಕ ಸೂಕ್ತವಾಗಿ ಸ್ಪಂದಿಸಿವೆ ಎಂದು ಹಣಕಾಸು ಸಚಿವ ಪ್ರಣವ್ ಮುಖರ್ಜಿ ಅವರು ಶಹಬ್ಬಾಸಗಿರಿ ನೀಡಿದ್ದಾರೆ.

ದೇಶದ ಆರ್ಥಿಕ ಬೆಳವಣಿಗೆಯಲ್ಲಿ ಬ್ಯಾಂಕ್‌ಗಳು ಪ್ರಮುಖ ಪಾತ್ರ ನಿರ್ವಹಿಸುತ್ತ ಬಂದಿವೆ. ಬಿಕ್ಕಟ್ಟಿನ ಸಂದರ್ಭದಲ್ಲಿ ಅರ್ಥ ವ್ಯವಸ್ಥೆಗೆ ಬೇಕಾದ ಸಾಲದ ಅಗತ್ಯ ಪೂರೈಸುವ ಮೂಲಕ ಬ್ಯಾಂಕ್‌ಗಳು ಸಕಾರಾತ್ಮಕವಾಗಿ ಸ್ಪಂದಿಸಿವೆ ಎಂದರು.

ವಿಜಯ ಬ್ಯಾಂಕ್‌ನ 40 ಶಾಖೆಗಳು ಮತ್ತು 80 ಎಟಿಎಂಗಳ ಉದ್ಘಾಟನೆಯನ್ನೂ ಪ್ರಣವ್ ನೆರವೇರಿಸಿದರು. ಈಗ ಬ್ಯಾಂಕ್‌ನ ಒಟ್ಟು ಶಾಖೆಗಳ ಸಂಖ್ಯೆ 1,240ಕ್ಕೆ ಏರಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.