ADVERTISEMENT

ಬ್ಯಾಂಕ್‌ ಮಂಡಳಿ ರದ್ದು ಇಲ್ಲ

ಪಿಟಿಐ
Published 13 ಮಾರ್ಚ್ 2018, 19:30 IST
Last Updated 13 ಮಾರ್ಚ್ 2018, 19:30 IST

ನವದೆಹಲಿ: ‘ಬ್ಯಾಂಕ್‌ ಮಂಡಳಿ (ಬಿಬಿಬಿ) ರದ್ದು ಮಾಡುವ ಯಾವುದೇ ಪ್ರಸ್ತಾಪ ಇಲ್ಲ’ ಎಂದು ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಶಿವ ಪ್ರತಾಪ ಶುಕ್ಲಾ ತಿಳಿಸಿದ್ದಾರೆ.

ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳಲ್ಲಿ ಮಾನವ ಸಂಪನ್ಮೂಲದ ಗುಣಮಟ್ಟವನ್ನು ನಿರೀಕ್ಷಿತ ಮಟ್ಟದಲ್ಲಿ ಸುಧಾರಿಸಲು ಬ್ಯಾಂಕ್‌ ಮಂಡಳಿಯಿಂದ ಸಾಧ್ಯವಾಗಿಲ್ಲ. ಹೀಗಾಗಿ ಮಂಡಳಿಯನ್ನು ರದ್ದು ಮಾಡುವ ಪ್ರಸ್ತಾವ ಇದೆಯೇ ಎನ್ನುವ ಪ್ರಶ್ನೆಗೆ ಅವರು ರಾಜ್ಯಸಭೆಯಲ್ಲಿ ಈ ಪ್ರತಿಕ್ರಿಯೆ ನೀಡಿದ್ದಾರೆ.

ಬ್ಯಾಂಕ್‌ಗಳ ಮೇಲ್ವಿಚಾರಣೆ ಮತ್ತು ಆಡಳಿತ ಸುಧಾರಣೆ ಉದ್ದೇಶದಿಂದ 2016ರಲ್ಲಿ ಮಾಜಿ ಸಿಎಜಿ ವಿನೋದ್‌ ರಾಯ್ ಅಧ್ಯಕ್ಷತೆಯಲ್ಲಿ ಮಂಡಳಿ ರಚನೆ ಮಾಡಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.