ADVERTISEMENT

ಬ್ಯಾಂಕ್ ಮುಷ್ಕರ

​ಪ್ರಜಾವಾಣಿ ವಾರ್ತೆ
Published 21 ಆಗಸ್ಟ್ 2012, 19:30 IST
Last Updated 21 ಆಗಸ್ಟ್ 2012, 19:30 IST

ನವದೆಹಲಿ (ಪಿಟಿಐ): ಬ್ಯಾಂಕಿಂಗ್ ಕಾಯ್ದೆಗೆ ತಿದ್ದುಪಡಿ ತರುವುದು ಮತ್ತು  ಖಂಡೇಲ್‌ವಾಲ್ ಸಮಿತಿ ಶಿಫಾರಸು  ಜಾರಿ  ವಿರೋಧಿಸಿ ಆಗಸ್ಟ್ 22 ಮತ್ತು 23ರಂದು ಎರಡು ದಿನಗಳ ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳ ನೌಕರರು ದೇಶವ್ಯಾಪಿ ಮುಷ್ಕರ ನಡೆಸಲಿದ್ದಾರೆ.

ಬ್ಯಾಂಕ್ ಕಾರ್ಮಿಕ ಒಕ್ಕೂಟಗಳ ಸಂಯುಕ್ತ ವೇದಿಕೆ (ಯುಎಫ್‌ಬಿಯು) ಮುಷ್ಕರಕ್ಕೆ ಕರೆ ನೀಡಿದೆ. ಆದರೆ, ಖಾಸಗಿ ಬ್ಯಾಂಕುಗಳು ಮತ್ತು `ಎಟಿಎಂ~ ಘಟಕಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ. ಮುಷ್ಕರದಿಂದ ಸಾರ್ವಜನಿಕರಿಗೆ ಕನಿಷ್ಠ ತೊಂದರೆಯಾಗಲಿದೆ ಎಂದು ಭಾರತೀಯ ಬ್ಯಾಂಕುಗಳ ಒಕ್ಕೂಟ (ಐಬಿಎ) ಹೇಳಿದೆ.

ಮುಖ್ಯ ಕಾರ್ಮಿಕ ಆಯುಕ್ತರ ಜತೆ ಒಕ್ಕೂಟದ ಪದಾಧಿಕಾರಿಗಳು ಮಂಗಳವಾರ ಬೆಳಿಗ್ಗೆ ನಡೆಸಿದ ಮಾತುಕತೆ ವಿಫಲವಾಗಿರುವುದರಿಂದ ಮುಷ್ಕರಕ್ಕೆ ಇಳಿಯುವುದು ಅನಿವಾರ್ಯವಾಯಿತು ಎಂದು ವೇದಿಕೆ ಪದಾಧಿಕಾರಿಗಳು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.