ADVERTISEMENT

ಮಣಪ್ಪುರಂ ಫೈನಾನ್ಸ್ ಸ್ಪಷ್ಟನೆ

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2012, 19:30 IST
Last Updated 14 ಫೆಬ್ರುವರಿ 2012, 19:30 IST

ನವದೆಹಲಿ (ಪಿಟಿಐ): ಕಳೆದ ವರ್ಷದ (2011) ಮಾರ್ಚ್ ತಿಂಗಳಿನಿಂದಲೇ ಸಾರ್ವಜನಿಕರಿಂದ ಠೇವಣಿ ಸ್ವೀಕರಿಸುವುದನ್ನು ಸ್ಥಗಿತಗೊಳಿಸಲಾಗಿದೆ ಎಂದು ಮಣಪ್ಪುರಂ ಫೈನಾನ್ಸ್ ಸ್ಪಷ್ಟಪಡಿಸಿದೆ.

ಈ ಬಗ್ಗೆ ಭಾರತೀಯ ರಿಸರ್ವ್ ಬ್ಯಾಂಕ್ ವ್ಯಕ್ತಪಡಿಸಿರುವ ಕಳವಳಕ್ಕೆ ಸೂಕ್ತ ರೀತಿಯಲ್ಲಿ ಸ್ಪಂದಿಸುವುದಾಗಿಯೂ ಸಂಸ್ಥೆ ತಿಳಿಸಿದೆ. ಠೇವಣಿ ಸ್ವೀಕರಿಸದ ಬ್ಯಾಂಕೇತರ ಹಣಕಾಸು ಸಂಸ್ಥೆಯಾಗಿರುವ (ಎನ್‌ಬಿಎಫ್‌ಸಿ) ಮಣಪ್ಪುರಂ ಫೈನಾನ್ಸ್ ಸಂಸ್ಥೆಯು ನಿಯಮ ಉಲ್ಲಂಘಿಸಿ ಸಾರ್ವಜನಿಕರಿಂದ ಠೇವಣಿ ಸ್ವೀಕರಿಸುತ್ತಿದೆ. ಇದು ಶಿಕ್ಷಾರ್ಹ ಅಪರಾಧ ಎಂದು `ಆರ್‌ಬಿಐ~ ಕಳೆದ ವಾರ ಎಚ್ಚರಿಕೆ ನೀಡಿತ್ತು.

ಕೇಂದ್ರೀಯ ಬ್ಯಾಂಕ್‌ನ ಎಚ್ಚರಿಕೆ ಹಿನ್ನೆಲೆಯಲ್ಲಿ ಫೆ. 10ರಂದು ಸಭೆ ಸೇರಿ ಚರ್ಚಿಸಿದ ಸಂಸ್ಥೆಯ ಆಡಳಿತ ಮಂಡಳಿಯು ಈ ಸ್ಪಷ್ಟನೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.