ನವದೆಹಲಿ (ಪಿಟಿಐ): ಸಂಶೋಧನೆ ಮತ್ತು ಅಭಿವೃದ್ಧಿ ಉದ್ದೇಶಕ್ಕೆ ಹಾಗೂ ತಯಾರಿಕಾ ಸಾಮರ್ಥ್ಯ ಹೆಚ್ಚಿಸಲು ದೇಶದ ಅತಿ ದೊಡ್ಡ ಕಾರು ತಯಾರಿಕಾ ಕಂಪೆನಿ ಮಾರುತಿ ಸುಜುಕಿ ಮುಂದಿನ ಹಣಕಾಸು ವರ್ಷದಲ್ಲಿ ರೂ. 4 ಸಾವಿರ ಕೋಟಿ ಹೂಡಿಕೆ ಮಾಡಲಿದೆ.
ಕಂಪೆನಿ ಇತ್ತೀಚೆಗೆ ನವದೆಹಲಿಯಲ್ಲಿ ನಡೆದ ವಾಹನ ಪ್ರದರ್ಶನ ಮೇಳದಲ್ಲಿ ಪ್ರದರ್ಶಿಸಿದ ‘ಎಸ್ಎಕ್ಸ್4 ಎಸ್ ಕ್ರಾಸ್’ ಮತ್ತು ಸಿಯಾಜ್ ಎಂಬ ಎರಡು ಹೊಸ ಮಾದರಿಗಳನ್ನೂ ಶೀಘ್ರದಲ್ಲೇ ಮಾರುಕಟ್ಟೆಗೆ ಬಿಡುಗಡೆ ಮಾಡಲಾಗುವುದು ಎಂದು ಕಂಪೆನಿ ವಕ್ತಾರರೊಬ್ಬರು ಶನಿವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.