ADVERTISEMENT

ಮೂಲ ಸೌಕರ್ಯ ವೃದ್ಧಿಗೆ `ಅಸೋಚಾಂ' ಆಗ್ರಹ

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2013, 19:59 IST
Last Updated 20 ಏಪ್ರಿಲ್ 2013, 19:59 IST

ಬೆಂಗಳೂರು:  `ಮೂಲಸೌಕರ್ಯ ಮತ್ತು ಸಣ್ಣ ಕೈಗಾರಿಕೆಗಳ ಅಭಿವೃದ್ಧಿಗೆ ಆದ್ಯತೆ ನೀಡುವ ರಾಜಕೀಯ ಪಕ್ಷಗಳಿಗೆ ಮುಂಬರುವ ಚುನಾವಣೆಯಲ್ಲಿ ಬೆಂಬಲ ನೀಡಲಾಗುವುದು' ಎಂದು ಭಾರತೀಯ ವಾಣಿಜ್ಯೋದ್ಯಮ ಮಹಾಸಂಘ (ಅಸೋಚಾಂ) ದಕ್ಷಿಣ ವಲಯದ ಅಧ್ಯಕ್ಷ  ಜೆ.ಕ್ರಾಸ್ತಾ ಹೇಳಿದರು.

ಹೆಲ್ಪ್‌ಲೈನ್ ಸೆಂಟರ್ ಅಂಡ್ ಅಡ್ವೈಸರಿ ಬೋರ್ಡ್ ಆಫ್ ಕರ್ನಾಟಕ ಶನಿವಾರ ಇಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ರಾಜಕೀಯ ಪಕ್ಷಗಳು ಮೂಲಸೌಕರ್ಯ ಅಭಿವೃದ್ಧಿಯನ್ನು ಕಡೆಗಣಿಸಿವೆ ಎಂದು ದೂರಿದರು. ಕೈಗಾರಿಕಾ ಕಟ್ಟಡಗಳಿಗೆ ಆಸ್ತಿ ತೆರಿಗೆಯಲ್ಲಿ ವಿನಾಯಿತಿ ನೀಡಬೇಕು. 

ಪರಿಸರ ಮಾಲಿನ್ಯದ ಹೆಸರಿನಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿಯು ಕೈಗಾರಿಕೆಗಳಿಗೆ ನೊಟೀಸ್ ಜಾರಿ ಮಾಡುವುದನ್ನು ನಿಲ್ಲಿಸಬೇಕು, ಹಳೆಯ ನೀತಿಗಳಿಗೆ ತಿದ್ದುಪಡಿ ತರಬೇಕು ಎಂದರು.`ಎಫ್‌ಕೆಸಿಸಿಐ' ಮಾಜಿ ಅಧ್ಯಕ್ಷ ಎನ್.ಎಸ್.ಶ್ರೀನಿವಾಸಮೂರ್ತಿ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT