ADVERTISEMENT

ರಫ್ತು ಉತ್ತೇಜನಕ್ಕೆ ಕ್ರಮ

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2012, 19:59 IST
Last Updated 22 ಡಿಸೆಂಬರ್ 2012, 19:59 IST

ನವದೆಹಲಿ (ಪಿಟಿಐ): ಜಾಗತಿಕ ಆರ್ಥಿಕ ಅಸ್ಥಿರತೆಯಿಂದ ಕುಸಿತ ಕಂಡಿರುವ ರಫ್ತು ವಹಿವಾಟಿಗೆ ಉತ್ತೇಜನ ನೀಡಲು ಸರ್ಕಾರ ಶೀಘ್ರದಲ್ಲೇ ಕೆಲವು ಕ್ರಮಗಳನ್ನು ಪ್ರಕಟಿಸಲಿದೆ ಎಂದು ಕೇಂದ್ರ ಕೈಗಾರಿಕಾ ಸಚಿವ ಆನಂದ ಶರ್ಮಾ ಹೇಳಿದ್ದಾರೆ.

ಪ್ರಸಕ್ತ ಹಣಕಾಸು ವರ್ಷದ ಏಪ್ರಿಲ್-ನವೆಂಬರ್ ಅವಧಿಯಲ್ಲಿ ರಫ್ತು ವಹಿವಾಟು ಶೇ 5.95ರಷ್ಟು ಕುಸಿತ ಕಂಡು 189.2 ಶತಕೋಟಿ ಡಾಲರ್‌ಗಳಿಗೆ (್ಙ10.40 ಲಕ್ಷ ಕೋಟಿಗೆ) ಇಳಿದಿದೆ ಎಂದು ಅವರು ಇಲ್ಲಿ ನಡೆದ ಸರ್ಕಾರ- ಉದ್ಯಮ ಜಂಟಿ ಕ್ರಿಯಾಪಡೆಯ 5ನೇ ವಾರ್ಷಿಕ ಸಮ್ಮೇಳನದಲ್ಲಿ   ಹೇಳಿದರು.

ಮಾರುಕಟ್ಟೆಯಲ್ಲಿ ನಗದು ಲಭ್ಯತೆ ಹೆಚ್ಚಿಸಲು ಬ್ಯಾಂಕುಗಳು ಕ್ರಮ ಕೈಗೊಳ್ಳಬೇಕು ಎಂದು ಉದ್ಯಮ ಮುಖಂಡರು ಸಚಿವರಿಗೆ ಮನವಿ ಮಾಡಿರು. ಇದಕ್ಕೆ ಸಂಬಂಧಿಸಿದಂತೆ ಉದ್ಯಮ ಉತ್ತೇಜನ ಮಂಡಳಿ ಸಭೆ ಶೀಘ್ರದಲ್ಲೇ ನಡೆಯಲಿದೆ ಎಂದು ಶರ್ಮಾ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.