ADVERTISEMENT

‘ರಫ್ತು ವಹಿವಾಟು ಹೆಚ್ಚಳ ಅಗತ್ಯ’‌

ಪಿಟಿಐ
Published 31 ಮಾರ್ಚ್ 2018, 19:30 IST
Last Updated 31 ಮಾರ್ಚ್ 2018, 19:30 IST

ನವದೆಹಲಿ: ‘ಅಮೆರಿಕದ ರಕ್ಷಣಾತ್ಮಕ ನೀತಿಯಿಂದ ಜಾಗತಿಕ ಮಾರುಕಟ್ಟೆ ಗಂಭೀರ ಸವಾಲುಗಳನ್ನು ಎದುರಿಸುತ್ತಿದೆ. ಈ ಸಂದರ್ಭದಲ್ಲಿ ಭಾರತ ತನ್ನ ರಫ್ತು ವಹಿವಾಟು ಹೆಚ್ಚಿಸಲು ಇರುವ ಹೊಸ ಮಾರ್ಗೊಪಾಯಗಳನ್ನು ಕಂಡುಕೊಳ್ಳಬೇಕಾಗಿದೆ’ ಎಂದು ವಾಣಿಜ್ಯ ಸಚಿವ ಸುರೇಶ್ ಪ್ರಭು ಅಭಿಪ್ರಾಯಪಟ್ಟಿದ್ದಾರೆ.

‘ಚೀನಾ ಒಳಗೊಂಡಂತೆ ತನ್ನ ಪ್ರಮುಖ ವ್ಯಾಪಾರ ಪಾಲುದಾರ ದೇಶಗಳ ವಿರುದ್ಧ ಅಮೆರಿಕವು ಅತ್ಯಂತ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ’ ಎಂದು ಹೇಳಿದ್ದಾರೆ.

ಚೀನಾದಿಂದ ಆಮದಾಗುವ ಸರಕುಗಳಿಗೆ ₹ 3.90 ಲಕ್ಷ ಕೋಟಿಯಷ್ಟು ಸುಂಕ ವಿಧಿಸುವ ಹಾಗೂ ಭಾರತದಿಂದ ಆಮದಾಗುವ ಉಕ್ಕು ಮತ್ತು ಅಲ್ಯುಮಿನಿಯಂಗೆ ಆಮದು ಸುಂಕ ಹೆಚ್ಚಿಸುವ ನಿರ್ಧಾರವನ್ನು ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಪ್ರಕಟಿಸಿದ್ದಾರೆ. ಇದು ವಿಶ್ವದಾದ್ಯಂತ ವ್ಯಾಪಕ ಟೀಕೆಗೆ ಗುರಿಯಾಗಿದೆ. ‘ರಫ್ತು ವಹಿವಾಟು ಹೆಚ್ಚಿಸುವ ಸಲುವಾಗಿ ಆಫ್ರಿಕಾದ ಕೆಲವು ದೇಶಗಳ ನಾಯಕರನ್ನು ಭೇಟಿ ಮಾಡಿ ಮಾತುಕತೆ ನಡೆಸಲಾಗುತ್ತಿದೆ’ ಎಂದಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.