ADVERTISEMENT

ರೈಲ್ವೆ ಕೇಟರಿಂಗ್‌ ಶೇ 5 ಜಿಎಸ್‌ಟಿ

ಪಿಟಿಐ
Published 6 ಏಪ್ರಿಲ್ 2018, 19:30 IST
Last Updated 6 ಏಪ್ರಿಲ್ 2018, 19:30 IST

ನವದೆಹಲಿ : ರೈಲ್ವೆ ಕೇಟರಿಂಗ್‌ ಸೇವೆಗೆ ಶೇ 5 ರಷ್ಟು ಜಿಎಸ್‌ಟಿ ತೆರಬೇಕಾಗುತ್ತದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ತಿಳಿಸಿದೆ.

ರೈಲು, ಪ್ಲಾಟ್‌ಫಾರಂ ಅಥವಾ ನಿಲ್ದಾಣದಲ್ಲಿ ಮಾರಾಟ ಮಾಡುವ ಆಹಾರ ಮತ್ತು ಪಾನೀಯಗಳಿಗೆ ಈ ತೆರಿಗೆ ಅನ್ವಯವಾಗಲಿದೆ. ಹಣಕಾಸು ಸಚಿವಾಲಯವು ರೈಲ್ವೆ ಮಂಡಳಿಗೆ ಪತ್ರ ಬರೆಯುವ ಮೂಲಕ ತೆರಿಗೆ ಬಗ್ಗೆ ಇದ್ದ  ಅನಿಶ್ಚಿತತೆ ದೂರ ಮಾಡಿದೆ.

ಭಾರತೀಯ ರೈಲ್ವೆ ಅಥವಾ ಭಾರತೀಯ ರೈಲ್ವೆ ಕೇಟರಿಂಗ್ ಮತ್ತು ಪ್ರವಾಸ ನಿಗಮವು ಪೂರೈಸುವ ಆಹಾರ ಮತ್ತು ಪಾನೀಯಗಳಿಗೆ ಇನ್‌ಪುಟ್‌ ಕ್ರೆಡಿಟ್‌ ಟ್ಯಾಕ್ಸ್‌ ಇಲ್ಲದೆ ಶೇ 5 ರಷ್ಟು ಜಿಎಸ್‌ಟಿ ಪಾವತಿಸಬೇಕು ಎನ್ನುವುದನ್ನು ಸ್ಪಷ್ಟಪಡಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ADVERTISEMENT

ವಿದೇಶಿ ವಿನಿಮಯ ಸಂಗ್ರಹ ಹೆಚ್ಚಳ
ಮುಂಬೈ
: ದೇಶದ ವಿದೇಶಿ ವಿನಿಮಯ ಮೀಸಲು ಸಂಗ್ರಹವು ₹ 11,830 ಕೋಟಿ ಏರಿಕೆ ಕಂಡು ಸಾರ್ವಕಾಲಿಕ ದಾಖಲೆ ಮಟ್ಟವಾದ

₹ 25.76 ಲಕ್ಷ ಕೋಟಿಗೆ ಏರಿಕೆ ಕಂಡಿದೆ.

ವಿದೇಶಿ ಕರೆನ್ಸಿಗಳ ಸಂಗ್ರಹದಲ್ಲಿ ಏರಿಕೆ ಆಗಿರುವುದರಿಂದ ಮೀಸಲು ಸಂಗ್ರಹದಲ್ಲಿ ಹೆಚ್ಚಳವಾಗಿದೆ ಎಂದು ರಿಸರ್ವ್ ಬ್ಯಾಂಕ್‌ ಮಾಹಿತಿ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.