ADVERTISEMENT

ರೈಲ್ವೆ ಬಜೆಟ್‌ಗೆ ಸ್ವಾಗತ

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2012, 15:20 IST
Last Updated 14 ಮಾರ್ಚ್ 2012, 15:20 IST

ನವದೆಹಲಿ (ಪಿಟಿಐ): ಪ್ರಯಾಣಿಕರ ಸುರಕ್ಷತೆ ಮತ್ತು ಮೂಲಸೌಕರ್ಯ ಆಧುನೀಕರಣಕ್ಕೆ ಆದ್ಯತೆ ನೀಡಿ ಕೇಂದ್ರ ರೈಲ್ವೆ ಸಚಿವ ದಿನೇಶ್ ತ್ರಿವೇದಿ ಮಂಡಿಸಿರುವ ಬಜೆಟ್ `ಸಮತೋಲಿತ~ ಎಂದು ಉದ್ಯಮ ವಲಯ ಬಣ್ಣಿಸಿದೆ. ಕಳೆದ ಕೆಲವು ವರ್ಷಗಳಿಂದ ರೈಲ್ವೆ ಪ್ರಯಾಣ ದರ ಏರಿಕೆ ಮಾಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಪ್ರಯಾಣ ದರವನ್ನು ಕನಿಷ್ಠ ಮಟ್ಟದಲ್ಲಿ ಪರಿಷ್ಕರಿಸಲಾಗಿದೆ~ ಎಂದು ಭಾರತೀಯ ಕೈಗಾರಿಕಾ ಒಕ್ಕೂಟದ ನಿರ್ದೇಶಕ ಚಂದ್ರಜಿತ್ ಬ್ಯಾನರ್ಜಿ ಹೇಳಿದ್ದಾರೆ. ಉತ್ತಮ ರೈಲ್ವೆ ಬಜೆಟ್ ಮಂಡಿಸಲಾಗಿದೆ ಎಂದು ಭಾರತೀಯ ವಾಣಿಜ್ಯೋದ್ಯಮ ಮಹಾಸಂಘ  ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.