ADVERTISEMENT

ವಿತ್ತೀಯ ನೀತಿ ಪ್ರಗತಿಗೆ ಅಡ್ಡಿ

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2011, 19:30 IST
Last Updated 9 ಸೆಪ್ಟೆಂಬರ್ 2011, 19:30 IST

ಕೋಲ್ಕತ್ತ (ಪಿಟಿಐ): ಹಣದುಬ್ಬರ ನಿಯಂತ್ರಿಸಲು ಭಾರತೀಯ ರಿಸರ್ವ್ ಬ್ಯಾಂಕ್ ಕೈಗೊಂಡಿರುವ ಬಿಗಿ ವಿತ್ತೀಯ ನೀತಿಯು, ದೇಶದ ಒಟ್ಟಾರೆ ಆರ್ಥಿಕ ಪ್ರಗತಿಯ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಎಂದು ಕೇಂದ್ರ ಹಣಕಾಸು ಸಚಿವ ಪ್ರಣವ್ ಮುಖರ್ಜಿ ಅಭಿಪ್ರಾಯಪಟ್ಟಿದ್ದಾರೆ. 

 ಬಿಗಿ ವಿತ್ತೀಯ ನೀತಿಯನ್ನು ಇನ್ನಷ್ಟು ದಿನಗಳ ಕಾಲ ವಿಸ್ತರಿಸುವುದರಿಂದ ಆರ್ಥಿಕ ವೃದ್ಧಿ ದರದ ಮೇಲೆ ಹಲವು ರೀತಿಯ ಪರಿಣಾಮಗಳು ಉಂಟಾಗಲಿದೆ. ಅಲ್ಪಾವಧಿ ಬಡ್ಡಿ ದರಗಳನ್ನು ಹೆಚ್ಚಿಸುವ ಬದಲು, ಪರ್ಯಾಯ ಮಾರ್ಗಗಳತ್ತ `ಆರ್‌ಬಿಐ~ ಗಮನಹರಿಸಬಹುದು ಎಂದು ಪ್ರಣವ್ ಇಲ್ಲಿ ನಡೆದ ಭಾರತೀಯ ಕೈಗಾರಿಕಾ ಒಕ್ಕೂಟದ (ಸಿಐಐ) ಸಭೆಯಲ್ಲಿ ಹೇಳಿದರು.

ಬಿಗಿ ವಿತ್ತೀಯ ನೀತಿಯಿಂದ ತಯಾರಿಕಾ ಕ್ಷೇತ್ರ ಹೆಚ್ಚಿನ ಒತ್ತಡ ಅನುಭವಿಸುತ್ತಿದೆ. ಕಳೆದ ಮಾರ್ಚ್ 2010ರಿಂದ 11 ಬಾರಿ `ಆರ್‌ಬಿಯ~ ಅಲ್ಪಾವಧಿ ಬಡ್ಡಿ ದರಗಳನ್ನು ಹೆಚ್ಚಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.