ADVERTISEMENT

ವಿಮೆ: ಐಆರ್‌ಡಿಎ ಮಾರ್ಗಸೂಚಿ

​ಪ್ರಜಾವಾಣಿ ವಾರ್ತೆ
Published 27 ಅಕ್ಟೋಬರ್ 2011, 19:30 IST
Last Updated 27 ಅಕ್ಟೋಬರ್ 2011, 19:30 IST

ನವದೆಹಲಿ (ಪಿಟಿಐ): ಷೇರುಪೇಟೆ ವಹಿವಾಟಿಗೆ ನೋಂದಣಿ ಮಾಡಿಕೊಳ್ಳುವ ಜೀವ ವಿಮೆಯೇತರ, ಸಾಮಾನ್ಯ ವಿಮಾ ಸಂಸ್ಥೆಗಳಿಗೆ ಮಾರ್ಚ್ ಅಂತ್ಯದ ಒಳಗೆ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಭಾರತೀಯ ವಿಮೆ ನಿಯಂತ್ರಣ ಪ್ರಾಧಿಕಾರ (ಐಆರ್‌ಡಿಎ) ಹೇಳಿದೆ.

ಸಾಮಾನ್ಯ ವಿಮೆ ಸಂಸ್ಥೆಗಳ ನೋಂದಣಿಗೆ ಸಂಬಂಧಿಸಿದ ಹೊಸ ಮಾರ್ಗಸೂಚಿಗಳನ್ನು ಮಾರ್ಚ್‌ನಲ್ಲಿ ಬಿಡುಗಡೆ ಮಾಡಲಾಗುವುದು. ಕರಡು ಪ್ರತಿಯನ್ನು ಕಂಪೆನಿಗಳಿಗೆ ಈಗಾಗಲೇ ನೀಡಲಾಗಿದೆ ಎಂದು `ಐಆರ್‌ಡಿಎ~  ಅಧ್ಯಕ್ಷ  ಜೆ. ಹರಿ ನಾರಯಣ್ ತಿಳಿಸಿದ್ದಾರೆ.

ಹೊಸ ಮಾರ್ಗಸೂಚಿಯನ್ವಯ ಕನಿಷ್ಠ  10 ವರ್ಷಗಳಿಂದ  ಕಾ ನಿರ್ವಹಿಸುತ್ತಿರುವ ಮತ್ತು ಉತ್ತಮ ಹಣಕಾಸು ಸಾಧನೆ ಹೊಂದಿರುವ ಕಂಪೆನಿಗಳಿಗೆ ಮಾತ್ರ ಷೇರುಪೇಟೆಯಲ್ಲಿ ವಹಿವಾಟು ನಡೆಸಲು ಅವಕಾಶ ಕಲ್ಪಿಸಲು ನಿರ್ಧರಿಸಲಾಗಿದೆ. ಸದ್ಯಕ್ಕೆ ಒಟ್ಟು 24  ಜೀವ ವಿಮೆ ಮತ್ತು ಜೀವ ವಿಮೆಯೇತರ ಸಂಸ್ಥೆಗಳು ಷೇರುಪೇಟೆ ವಹಿವಾಟಿನಲ್ಲಿ ತೊಡಗಿಸಿಕೊಂಡಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.