ADVERTISEMENT

ಶೀಘ್ರವೇ ಪ್ರಾಯೋಗಿಕ ವಿಮಾನ ಹಾರಾಟ: ಸಚಿವ ಶರಣಪ್ರಕಾಶ

​ಪ್ರಜಾವಾಣಿ ವಾರ್ತೆ
Published 22 ಮಾರ್ಚ್ 2018, 20:15 IST
Last Updated 22 ಮಾರ್ಚ್ 2018, 20:15 IST
ಡಾ. ಶರಣಪ್ರಕಾಶ ಪಾಟೀಲ
ಡಾ. ಶರಣಪ್ರಕಾಶ ಪಾಟೀಲ   

ಕಲಬುರ್ಗಿ: ‘ಇಲ್ಲಿನ ಸೇಡಂ ರಸ್ತೆಯಲ್ಲಿರುವ ವಿಮಾನ ನಿಲ್ದಾಣದ ರನ್‌ವೇ ಕಾಮಗಾರಿ ಪೂರ್ಣಗೊಂಡಿದ್ದು, ಏಪ್ರಿಲ್ ಮೊದಲ ವಾರದಲ್ಲಿ ಪ್ರಾಯೋಗಿಕ ವಿಮಾನ ಹಾರಾಟ ನಡೆಯಲಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಹೇಳಿದರು.

‘3.26 ಕಿ.ಮೀ ರನ್‌ವೇ ಸಿದ್ಧಗೊಂಡಿದೆ. ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರವು (ಎಎಐ) ಪ್ರಾಯೋಗಿಕ ಹಾರಾಟಕ್ಕೆ ಅನುಮತಿ ನೀಡಿದೆ. ವಿಮಾನಯಾನ ಮತ್ತು ವಿಮಾನ ನಿಲ್ದಾಣ ನಿರ್ವಹಣೆಗೆ ಈಗಾಗಲೇ ಟೆಂಡರ್ ಕರೆಯಲಾಗಿದೆ. ಹೈದರಾಬಾದ್‌ನ ಜಿಎಂಆರ್‌ ಸಂಸ್ಥೆಯು ಪ್ರಾಯೋಗಿಕ ವಿಮಾನ ಹಾರಾಟ ನಡೆಸಲಿದೆ’ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಚುನಾವಣೆ ಘೋಷಣೆಯಾದರೂ ಪ್ರಾಯೋಗಿಕ ವಿಮಾನ ಹಾರಾಟಕ್ಕೆ ಯಾವುದೇ ತೊಂದರೆ ಆಗುವುದಿಲ್ಲ. ಅಧಿಕಾರಿಗಳು ಅದನ್ನು ನಿಭಾಯಿಸುತ್ತಾರೆ. ನಮಗೆ ಕೆಲಸದಲ್ಲಿ ನಂಬಿಕೆ ಇದೆಯೇ ಹೊರತು ವಿಮಾನ ಹಾರಾಟಕ್ಕೆ ನಾವೇ ಚಾಲನೆ ನೀಡಿದ್ದೇವೆ ಎಂದು ಬಿಂಬಿಸಿಕೊಳ್ಳುವ ಅವಶ್ಯಕತೆ ಇಲ್ಲ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.