ADVERTISEMENT

ಶೇ 5.5ರಷ್ಟು `ಜಿಡಿಪಿ' ರಂಗರಾಜನ್ ವಿಶ್ವಾಸ

​ಪ್ರಜಾವಾಣಿ ವಾರ್ತೆ
Published 15 ಡಿಸೆಂಬರ್ 2012, 19:54 IST
Last Updated 15 ಡಿಸೆಂಬರ್ 2012, 19:54 IST
ನವದೆಹಲಿಯಲ್ಲಿ ಶನಿವಾರ ಭಾರತೀಯ ವಾಣಿಜ್ಯೋದ್ಯಮ ಮಹಾಸಂಘಗಳ ಒಕ್ಕೂಟದ (ಫಿಕ್ಕಿ) 85ನೇ ವಾರ್ಷಿಕ ಸಾಮಾನ್ಯ ಸಭೆಗೆ ಆಗಮಿಸಿದ ಪ್ರಧಾನಿ ಮನಮೋಹನ್ ಸಿಂಗ್, ಫಿಕ್ಕಿ ಮಾಜಿ ಅಧ್ಯಕ್ಷ ಡಿ.ಎನ್ ಪಟೊಡಿಯಾ ಅವರಿಗೆ ಹಸ್ತಲಾಘವ ಮಾಡಿದರು. ಹಾಲಿ ಅಧ್ಯಕ್ಷ ಆರ್.ವಿ ಕನೋರಿಯಾ, ಚುನಾಯಿತ ಅಧ್ಯಕ್ಷೆ ನೈನಾ ಲಾಲ್ ಕಿದ್ವಾಯಿ ಚಿತ್ರದಲ್ಲಿ ಇದ್ದಾರೆ 	- ಪಿಟಿಐ ಚಿತ್ರ

ನವದೆಹಲಿ (ಪಿಟಿಐ): ಪ್ರಸಕ್ತ ಹಣಕಾಸು ವರ್ಷದಲ್ಲಿ ಒಟ್ಟಾರೆ ರಾಷ್ಟ್ರೀಯ ಉತ್ಪನ್ನವು (ಜಿಡಿಪಿ) ಶೇ 5.5ರಿಂದ    ಶೇ 6ರಷ್ಟು ಪ್ರಗತಿ ದಾಖಲಿಸಿದೆ ಎಂದು ಪ್ರಧಾನಿ ಆರ್ಥಿಕ ಸಲಹಾ ಸಮಿತಿ ಅಧ್ಯಕ್ಷ ಸಿ.ರಂಗರಾಜನ್ ಹೇಳಿದ್ದಾರೆ.

ಶನಿವಾರ ಇಲ್ಲಿ ನಡೆದ ಭಾರತೀಯ ವಾಣಿಜ್ಯೋದ್ಯಮ ಮಹಾಸಂಘಗಳ ಒಕ್ಕೂಟದ (ಫಿಕ್ಕಿ) 85ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದರು. ಇಷ್ಟು ಬೇಗನೆ ವರ್ಷಾಂತ್ಯಕ್ಕೆ ಎಷ್ಟು `ಜಿಡಿಪಿ' ಇರಲಿದೆ ಎನ್ನುವುದನ್ನು ವಿಶ್ಲೇಷಿಸಲು ಸಾಧ್ಯವಿಲ್ಲ. ಕೇಂದ್ರ ಸರ್ಕಾರ ಆರ್ಥಿಕ ಸುಧಾರಣೆಗಳನ್ನು ಪ್ರಕಟಿಸಿದ ನಂತರ ಷೇರುಪೇಟೆಗಳು ಚುರುಕುಗೊಂಡಿದ್ದು, ಹೂಡಿಕೆ ಚಟುವಟಿಕೆಗಳು ಹೆಚ್ಚಿವೆ. ಇವೆಲ್ಲವೂ ಒಟ್ಟಾರೆ ವೃದ್ಧಿ ದರದ ಮೇಲೆ ಧನಾತ್ಮಕ ಪರಿಣಾಮ ಬೀರಲಿವೆ ಎಂದರು. 

ಕಳೆದ ಹಣಕಾಸು ವರ್ಷದ ನಾಲ್ಕನೆಯ ತ್ರೈಮಾಸಿಕದಲ್ಲಿ `ಜಿಡಿಪಿ' 9 ವರ್ಷಗಳ ಹಿಂದಿನ ಮಟ್ಟವಾದ ಶೇ 6.5ಕ್ಕೆ ಕುಸಿತ ಕಂಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.