ADVERTISEMENT

ಷೇರುಪೇಟೆಯಲ್ಲಿ ಮಾರಾಟದ ಒತ್ತಡ

​ಪ್ರಜಾವಾಣಿ ವಾರ್ತೆ
Published 11 ಜೂನ್ 2018, 19:12 IST
Last Updated 11 ಜೂನ್ 2018, 19:12 IST
ಷೇರುಪೇಟೆಯಲ್ಲಿ ಮಾರಾಟದ ಒತ್ತಡ
ಷೇರುಪೇಟೆಯಲ್ಲಿ ಮಾರಾಟದ ಒತ್ತಡ   

ಮುಂಬೈ: ಜಾಗತಿಕ ವಿದ್ಯಮಾನಗಳ ಪ್ರಭಾವಕ್ಕೆ ಒಳಗಾಗಿ ದೇಶದ ಷೇರುಪೇಟೆಗಳು ಅಲ್ಪ ಏರಿಕೆಯನ್ನಷ್ಟೇ ಕಂಡಿವೆ.

‘ಜಿ–7’ ರಾಷ್ಟ್ರಗಳ ಶೃಂಗಸಭೆಯಲ್ಲಿ ವಾಣಿಜ್ಯ ಬಿಕ್ಕಟ್ಟಿಗೆ ಪರಿಹಾರ ಕಂಡುಕೊಳ್ಳುವ ನಿರೀಕ್ಷೆ ಫಲಿಸಿಲ್ಲ. ಇದರಿಂದ ಅಮೆರಿಕ ಮತ್ತು ಮಿತ್ರರಾಷ್ಟ್ರಗಳ ನಡುವೆ ಹದಗೆಟ್ಟಿರುವ ವಾಣಿಜ್ಯ ಸಂಬಂಧ ಸುಧಾರಣೆಯಾಗುವ ನಿರೀಕ್ಷೆ ಹುಸಿಯಾಗಿದೆ. ಮತ್ತೆ ‘ಜಾಗತಿಕ ವಾಣಿಜ್ಯ ಸಮರದ ಭೀತಿ ಎದುರಾಗಿದೆ.

ಇದರ ಜತೆಗೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಮತ್ತು ಉತ್ತರ ಕೊರಿಯಾ ಅಧ್ಯಕ್ಷ ಕಿಮ್‌ ಜಂಗ್‌ ಉನ್‌ ಅವರು ಭೇಟಿಯಾಗಲಿರುವುದು ಕುತೂಹಲ ಕೆರಳಿಸಿದೆ. ಈ ಸಂಗತಿಗಳು ಮಾರಾಟದ ಒತ್ತಡ ಸೃಷ್ಟಿಸಿ ಸೂಚ್ಯಂಕದ ಗಳಿಕೆಗೆ ಅಡ್ಡಿಯುಂಟು ಮಾಡಿವೆ ಎಂದು ತಜ್ಞರು ಹೇಳಿದ್ದಾರೆ.

ADVERTISEMENT

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕವು (ಬಿಎಸ್‌ಇ) ಮಾರಾಟದ ಒತ್ತಡಕ್ಕೆ ಒಳಗಾಗಿ ಮಧ್ಯಂತರ ವಹಿವಾಟಿನಲ್ಲಿ 232 ಅಂಶ ಇಳಿಕೆ ಕಂಡಿತ್ತು. ನಂತರ ಚೇತರಿಕೆ ಹಾದಿಗೆ ಮರಳಿತು. 40 ಅಂಶ ಏರಿಕೆ ಕಂಡು 35,483 ಅಂಶಗಳಲ್ಲಿ ವಹಿವಾಟು ಅಂತ್ಯಕಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.